Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಅಂಕಲಗಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ‌ನೀಡುವರು‌ ಯಾರು?

localview news

ಬೆಳಗಾವಿ: ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದ ಸರ್ಕಾರಿ ಆಸ್ಪತ್ರೆ ವೈದ್ಯರು ಇಲ್ಲದೆ ಹಾಗೂ ಸಿಬ್ಬಂದಿಗಳ ಕೊರತೆಯಿಂದ ಗ್ರಾಮಸ್ಥರು ಪರದಾಡುವಂತಾಗಿದೆ.

ಸುತ್ತ ಮುತ್ತಲಿನ ಸ್ಥಳೀಯ ಗ್ರಾಮಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯವಿದ್ದು ಯಾವುದೇ ವೈದ್ಯಕೀಯ ಸೌಲಭ್ಯ ದೊರೆಯುತ್ತಿಲ್ಲ.

ಕಳೆದ 3 ತಿಂಗಳಿಂದ ಆಸ್ಪತ್ರೆಯಲ್ಲಿ ವೈದ್ಯರಿಲ್ಲ ಬರುವ ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯುತ್ತಿಲ್ಲ ಜೊತೆಗೆ ಕೋವಿಡ್ ನಿಯಮ ಪಾಲನೆ ಆಗುತ್ತಿಲ್ಲ ಇಲ್ಲಿನ ಸಿಬ್ಬಂದಿಗಳೆ ಮಾಸ್ಕ್ ಬಳಸುತ್ತಿಲ್ಲ.

ಚಿಕಿತ್ಸೆ ಪಡೆಯಲು ಬರುವ ರೋಗಿಗಳ ಮೇಲೆ ಸಿಬ್ಬಂದಿಗಳು ದರ್ಪ ತೋರುತ್ತಿದ್ದು, ಬೇಕಾಬಿಟ್ಟಿ ಮಾತನಾಡುತ್ತಿದ್ದಾರೆ. ಈ ಕುರಿತು ಸ್ಥಳೀಯರು ನೊಂದುಕೊಂಡು ಪಕ್ಕದ ಅಕ್ಕತಂಗೆರಹಾಳ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ತೆರಳುತ್ತಿದ್ದಾರೆ.

ಇಲ್ಲಿನ ಸ್ಥಳೀಯರಿಗೆ ಅಂಕಲಗಿ ಗ್ರಾಮದ ಆಸ್ಪತ್ರೆ ಆಟಕ್ಕುಂಟು ಲೆಕ್ಕಕ್ಕಿಲದ ಕಟ್ಟಡವಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ವ್ಯವಸ್ಥೆ ಕಲ್ಪಿಸದೆ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಸ್ಥಳೀಯರ ಅಭಿಪ್ರಾಯವಾಗಿದೆ.