ಹಿರೇಬಾಗೇವಾಡಿಗೆ ಬುಧವಾರ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ
ಬೆಳಗಾವಿ:ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ ಬುಧವಾರ ಹಿರೇಬಾಗೇವಾಡಿಗೆ ಆಗಮಿಸಲಿದ್ದಾರೆ.
ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆ ಕುರಿತು ಕಾಂಗ್ರೆಸ್ ಹಮ್ಮಿಕೊಂಡಿರುವ ಜನಾಂದೋಲನದ ಅಂಗವಾಗಿ ಅವರು ಹಿರೇಬಾಗೇವಾಡಿಯಲ್ಲಿ ಸಮಾವೇಶ ನಡೆಸಲಿದ್ದಾರೆ.
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ, ಯುವ ಕಾಂಗ್ರೆಸ್ ರಾಜ್ಯ ನಿಯೋಜಿತ ಅಧ್ಯಕ್ಷ ಮೊಹ್ಮದ್ ನಲ್ಪಾಡ್ ಸೇರಿದಂತ್ ಹಲವರು ಕಾರ್ಯಕ್ರದಲ್ಲಿ ಭಾಗವಹಿಸಲಿದ್ದಾರೆ
ಬೆಳಗ್ಗೆ 10 ಗಂಟೆಗೆ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಹಿರೇಬಾಗೇವಾಡಿಯ ಶಿವಾಲಯ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೃಣಾಲ ಹೆಬ್ಬಾಳಕರ್ ತಿಳಿಸಿದ್ದಾರೆ.