ಜವಳಿ ಖಾತೆಯಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ: ಸಚಿವ ಮುನೇನಕೊಪ್ಪ
ಬೆಳಗಾವಿ:ಜವಳಿ ಖಾತೆಯಲ್ಲಿ ಸುಮಾರು 10 ಲಕ್ಷ ಉದ್ಯೋಗವನ್ನು ಸೃಷ್ಟಿ ಮಾಡುವ ಯೋಜನೆಯನ್ನು ಸರಕಾರ ರೂಪಿಸಿಕೊಂಡಿದೆ ಎಂದು ಕೈಮಗ್ಗ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇಮಕೊಪ್ಪ ಹೇಳಿದರು.
ಮಂಗಳವಾರ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ದುಡಿಯುವ ಕೈಗಳಿಗೆ ಉದ್ಯೋಗ ಕೊಡುವ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಲಿದ್ದೇವೆ.
ಸಕ್ಕರೆ ಹಾಗೂ ಜವಳಿ ಉದ್ಯಮಕ್ಕೆ ಹೆಚ್ಚಿನ ಒತ್ತು ನೀಡುವ ಕೆಲಸ ಮಾಡಲಾಗುವುದು. ನೇಕಾರರ ಕುಟುಂಬದ ಸಿಸಿ ಖಾತೆಯ ಹೊರತು ಪಡೆಸಿ ಸಾಲಮನ್ನಾ ಮಾಡಲಾಗಿದೆ ಎಂದರು.
ಜವಳಿ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ತರುವ ನಿಟ್ಟಿನಲ್ಲಿ ಅದನ್ನು ಪುನಶ್ಚೇತನ ಮಾಡುವ ನೀತಿ ನಿಯಮಗಳ ಪ್ರಕಾರ ನೇಕಾರರು ತಯಾರು ಪಡಿಸಿದ ಖಾದಿ ಉದ್ಯಮಕ್ಕೆ ಪ್ರೋತ್ಸಾಹ ಮಾಡಲಾಗುವುದು ಎಂದು ಹೇಳಿದರು.ಮಾಜಿ ಶಾಸಕ ಜಗದೀಶ್ ಮೆಟಗುಡ್ಡ ಉಪಸ್ಥಿತರಿದ್ದರು.