Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಹಾನಗಲ್ ಉಪಚುನಾವಣೆಯಲ್ಲಿ ಮರಿ ಹುಲಿ ಘರ್ಜನೆ

localview news

ಬೆಂಗಳೂರು: ವಿಜಯಪುರ ಜಿಲ್ಲೆಯ ಸಿಂದಗಿ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಶನಿವಾರ ಬಿಜೆಪಿ ಕೋರ್ ಕಮಿಟಿ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿತ್ತು.

ಇದರಲ್ಲಿ ಕರ್ನಾಟಕ ರಾಜ್ಯದ ಚುನಾವಣಾ ಚಾಣಕ್ಯ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಚುನಾವಣೆ ಉಸ್ತುವಾರಿ ನೀಡದೆ ಇದ್ದದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸೋಮವಾರ ಹಾನಗಲ್ ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಚಿವರಾದ ಮುರುಗೇಶ್ ನಿರಾಣಿ, ಜೆ.ಸಿ.ಮಾಧುಸ್ವಾಮಿ, ಬಿ.ಸಿ.ಪಾಟೀಲ, ಶಿವರಾಂ ಹೆಬ್ಬಾರ್, ಸಂಸದ ಶಿವಕುಮಾರ ಉದಾಸಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್. ರವಿಕುಮಾರ, ಮಹೇಶ ಟೆಂಗಿನಕಾಯಿ, ಶಾಸಕರಾದ ರಾಜುಗೌಡ, ನೆಗರು ಓಲೇಕಾರ, ಚಂದ್ರಪ್ಪ, ವಿರೂಪಾಕ್ಷಪ್ಪ ಬಳ್ಳಾರಿ, ಅರುಣ ಕುಮಾರ ಗುತ್ತೂರು ಅವರಿಗೆ ಬಿಜೆಪಿ ಜವಾಬ್ದಾರಿ ನೀಡಿದೆ.

ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಸಚಿವರಾದ ಗೋವಿಂದ್ ಕಾರಜೋಳ, ವಿ.ಸೋಮಣ್ಣ, ಸಿ.ಸಿ.ಪಾಟೀಲ, ಶಶಿಕಲಾ ಜೊಲ್ಲೆ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಲಕ್ಷ್ಮಣ ಸವದಿ, ಸೋಮನಗೌಡ ಪಾಟೀಲ, ಎ.ಎಸ್.ಪಾಟೀಲ ನಡಹಳ್ಳಿ, ಪಿ.ರಾಜೀವ, ಮಾಜಿ ಶಾಸಕರಾದ ಶ್ರೀಕಾಂತ ಕುಲಕರ್ಣಿ, ಬಾಬುರಾವ್ ಚಿಂಚನಸೂರು ಅವರನ್ನು ನೇಮಕ ಮಾಡಿ ಜವಾಬ್ದಾರಿ ನೀಡಲಾಗಿದೆ.

ಶನಿವಾರ ಬಿಜೆಪಿ ಕೊರ ಕಮಿಟಿಯಲ್ಲಿ ಮಾಡಲಾದ ಚುನಾವಣೆಯ ಉಸ್ತುವಾರಿಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೆಸರನ್ನು ಪರಿಗಣನೆಗೆ ತೆಗೆದುಕೊಂಡಿರಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬಿ.ವೈ.ವಿಜಯೇಂದ್ರ ಅವರಿಗೆ ಹಾನಗಲ್ ಚುನಾವಣಾ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.