Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಪ್ರಿಯಾಂಕಾ ಬಂಧನ ಖಂಡಿಸಿ ಪಂಜಿನ ಮೆರವಣಿಗೆ ನಡೆಸಿದ ಅಥಣಿ ಯುವ ಕಾಂಗ್ರೇಸ್

localview news

ಅಥಣಿ : ಉತ್ತರ ಪ್ರದೇಶ ಕಾಂಗ್ರೆಸ್‌ ಉಸ್ತುವಾರಿ ‍ಪ್ರಿಯಾಂಕಾ ವಾದ್ರಾ ಅವರನ್ನು ಬಂಧಿಸಿದ ಘಟನೆ ಖಂಡಿಸಿ ತಾಲೂಕಾ ಕಾಂಗ್ರೆಸ್‌ ಯುವ ಘಟಕದಿಂದ ಇತ್ತೀಚೆಗೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಪಂಜು ಹಿಡಿದು ಪ್ರತಿಭಟನೆ ನಡೆಸಲಾಯಿತು.

ನಗರದ ಪ್ರಮುಖ ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್‌ ಧ್ವಜ ಹಿಡಿದು ಮೇಣದ ಬತ್ತಿ ಹಚ್ಚಿ, ಪಂಜು ಹಿಡಿದು ಪ್ರತಿಭಟನೆ ನಡೆಸಿದ ಕಾರ್ಯರ್ತರು, ಕೇಂದ್ರ ಸರ್ಕಾರ ಹಾಗೂ ಉತ್ತರಪ್ರದೇಶ ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದರು.

ಈ ವೇಳೆ ಮಾತನಾಡಿದ ಮುಖಂಡ ಗಜಾನನ ಮಂಗಸೂಳಿ ಅವರು ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಉತ್ತರ ಪ್ರದೇಶದ ಲಖೀಮಪುರ ಖೇರಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ಮೊಂಡುತನ ಕಾರಣ ಈ ಪ್ರತಿಭಟನೆಯಲ್ಲಿ ಭಾನುವಾರ ಹಿಂಸಾಚಾರ ನಡೆದಿದೆ. ಇದರಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಜನರು ಮೃತಪಟ್ಟಿದ್ದಾರೆ. ಇದರ ಹೊಣೆಯನ್ನು ಯೋಗಿ ಆದಿನಾಥ ಅವರ ಸರ್ಕಾರವೇ ಹೊರಬೇಕು ಎಂದು ಹೇಳಿದರು.

ಅಥಣಿ ಬ್ಲಾಕ್ ಕಾಂಗ್ರೇಸ್ ಯುವ ಘಟಕ ಅಧ್ಯಕ್ಷ ರವಿ ಬಡಕಂಬಿ ಮಾತನಾಡುತ್ತಾ ರೈತರನ್ನು ಭೇಟಿಯಾಗಲು ಹೊರಟ ನಮ್ಮ ನಾಯಕಿ ಪ್ರಿಯಾಂಕಾ ವಾದ್ರಾ ಅವರನ್ನು ತಡೆಯಲು ಸರ್ಕಾರ ಅವರನ್ನು ಬಂಧಿಸಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧ ತಕ್ಷಣ ಅವರನ್ನು ಬಿಡುಗಡೆ ಮಾಡಬೇಕು, ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಅಥಣಿ ಬ್ಲಾಕ್ ಅಧ್ಯಕ್ಷ ಸಿದ್ದಾರ್ಥ ಸಿಂಗೆ, ತೆಲಸಂಗ್ ಬ್ಲಾಕ್ ಅಧ್ಯಕ್ಷ ಶ್ರೀಕಾಂತ ಪೂಜಾರಿ, ಮುಖಂಡರಾದ ಬಸವರಾಜ ಬುಟಾಳಿ, ಸದಾಶಿವ ಬುಟಾಳಿ, ಧರೆಪ್ಪ ಠಕ್ಕಣ್ಣವರ, ಅನೀಲ ಸುಣಧೋಳಿ, ಅಸ್ಲಂ ನಾಲಬಂದ, ರಮೇಶ ಸಿಂದಗಿ, ನಿಶಾಂತ ದಳವಾಯಿ, ಶಿವಾನಂದ ಗುಡ್ಡಾಪೂರ, ತೌಸಿಫ್ ಸಾಂಗಲೀಕರ, ಹೊಳೆಪ್ಪ ಪೂಜಾರಿ, ರೇಖಾ ಪಾಟೀಲ, ರವಿ ಬಕಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.