Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಸಂಜಯ ಪಾಟೀಲ ತಿಥಿ ಮಾಡಿದ ವಿವಿಧ ದಲಿತ ಸಂಘಟನೆಗಳು

localview news

ಬೆಳಗಾವಿ :ಗ್ರಾಮೀಣ ಮತಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಶಾಸಕ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಅವರ ಶವ ಯಾತ್ರೆ ನಡೆಸಿದ ವಿವಿಧ ದಲಿತ ಸಂಘಟನೆಗಳು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಸಂಜಯ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಸಂಜಯ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿರುವುದು ಇದು ಬಿಜೆಪಿಯ ಸಂಸ್ಕೃತಿಯನ್ನು ತೋರಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಬೇಟಿ ಬಜಾವ್ ಬೇಟಿ ಪಡಾವೋ ಎಂದು ಹೇಳುತ್ತಾರೆ. ಆದರೆ ಅವರ ಪಕ್ಷದ ಮಾಜಿ ಶಾಸಕ ಸಂಜಯ ಪಾಟೀಲ ಒಬ್ಬ‌ ಮಹಿಳೆಯ ವಿರುದ್ಧ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡುವ ಬಲದಲು ನಾಲಿಗೆ ಹರಿಬಿಟ್ಟು ಕೀಳು ರಾಜಕೀಯ ಮಾಡುತ್ತಿರುವ ಸಂಜಯ ಪಾಟೀಲ ಬಹಿರಂಗವಾಗಿ ಶಾಸಕಿ ಹೆಬ್ಬಾಳ್ಕರ್ ಅವರಿಗೆ ಕ್ಷಮಾಪಣೆ ಕೇಳಬೇಕೆಂದು ಒತ್ತಾಯಿಸಿದರು.

ಮಾಜಿ ಶಾಸಕ ಸಂಜಯ ಪಾಟೀಲ ಶಾಸಕಿ ಹೆಬ್ಬಾಳ್ಕರ್ ಅವರ ರಾಜಕೀಯ ಬೆಳವಣಿಗೆ ಸಹಿಸದೆ ಇಂಥ ವಿವಾದಾತ್ಮಕ ‌ಹೇಳಿಕೆ ನೀಡಿರುವುದು ಬಿಜೆಪಿಗೆ ಗೌರವ ತರುವುದಿಲ್ಲ. ಕೂಡಲೇ ಹೆಬ್ಬಾಳ್ಕರ್ ಅವರಿಗೆ ಸಂಜಯ ಪಾಟೀಲ ಕ್ಷಮಾಪಣೆ ಕೇಳಬೇಕೆಂದು ಆಗ್ರಹಿಸಿದರು.

ಮಲ್ಲೇಶ ಚೌಗುಲೆ, ದೀಪಕ ಕಾಂಬಳೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.