Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಬೆಳಗಾವಿ ಲೋಕಸಭಾ ಕಾಂಗ್ರೆಸ್ ಗೆಲವು ಸಾಧಿಸುವವರೆಗೂ ನಾನೆ ಅಭ್ಯರ್ಥಿ: ಶಾಸಕ ಸತೀಶ

localview news

ಬೆಳಗಾವಿ: ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಸಾಧಿಸುವ ವರೆಗೂ ನಾನೇ ಕಾಂಗ್ರೆಸ್ ಅಭ್ಯರ್ಥಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಬುಧವಾರ ನಗರದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ‌ ಅವರು, ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲವು ಸಾಧಿಸುವ ವರೆಗೂ ನಾನೇ ಅಭ್ಯರ್ಥಿಯಾಗಿರುತ್ತೇನೆ. ಯಮಕನಮರಡಿ ವಿಧಾನಸಭಾ ಚುನಾವಣೆಯಲ್ಲಿ ಪುತ್ರ ರಾಹುಲ್ ಜಾರಕಿಹೊಳಿ, ಅಥವಾ ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧೆ ಮಾಡುವ ವಿಚಾರ ಕ್ಷೇತ್ರದ ಜನರಿಗೆ ಬಿಟ್ಟಿದ್ದು, ಈ ವಿಧಾನಸಭಾ ಚುನಾವಣೆಯಲ್ಲಿ ನಾನೇ ಸ್ಪರ್ಧೆ ಮಾಡುತ್ತೇನೆ.

ವಿರೋಧಿಗಳು ಯಾವಾಗಲು ಇರಬೇಕು. ಅಂದಾಗ ನಾವು ಎಚ್ಚರಿಕೆಯಿಂದ ಇರುತ್ತೇವೆ. ಮೈಕು ಇದೆ ಎಂದು ಪಂಡರಾಪುರ, ಕೊಲ್ಲಾಪುರ ಸುತ್ತಿ ಬೆಳಗಾವಿಯಲ್ಲಿ ಬೇಕಾದ ರೀತಿಯಲ್ಲಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಬಿಜೆಪಿ ಮಾಜಿ ಶಾಸಕ ಸಂಜಯ ಪಾಟೀಲ ಹೇಳಿಕೆಯನ್ನು ಖಂಡಿಸಿದರು.ಸ್ಥಳೀಯ ವಿಧಾನ ಪರಿಷತ್ ಚುನಾವಣೆಯಲ್ಲಿ ಐದಾರು ಆಕಾಂಕ್ಷೆಗಳು ಅರ್ಜಿ ಸಲ್ಲಿಸಿದ್ದಾರೆ. ಒಂದೇ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ ಎಂದರು.ಕಳೆದ ಬಾರಿ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ತಂಡ ಈಗ ಕಾಂಗ್ರೆಸ್ ನಲ್ಲಿ ಇಲ್ಲ. ಹಾಗಾಗಿ ಈ ಬಾರಿ ಚುನಾವಣೆಯಲ್ಲಿ ನಮ್ಮ ಮತ ಬ್ಯಾಂಕ್ ಇವೆ. ನಮ್ಮ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲಾಗುವುದು ಎಂದರು.

ವಿ ಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಕಾರಣಕ್ಕೆ‌ ಹೋಗುವ ವಿಷಯ ನನಗೆ ಗೊತ್ತಿಲ್ಲ ಎಂದರು. ಉತ್ತರ ಪ್ರದೇಶದಲ್ಲಿ ಕೊಲೆ ಪ್ರಕರಣಗಳು ಹೊಸತಲ್ಲ. ಇದಕ್ಕೆ‌ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.ಖಾನಾಪುರ ಅರಬಾಜ್ ಕೊಲೆ ಪ್ರಕರಣದ ಕುರಿತು ವರದಿ ತರಿಸಿಕೊಂಡು ಪೊಲೀಸರಿಗೆ ಈ ಪ್ರಕರಣ ಇತ್ಯರ್ಥಗೊಳಿಸಬೇಕು ಎಂದು ಒತ್ತಾಯಿಸಲಾಗುವುದು. ಸತ್ಯಾಸತ್ಯತೆ ಪೊಲೀಸರು ಬಯಲಿಗೆ ತರಬೇಕು ಎಂದರು.ಬೆಳಗಾವಿ ಗ್ರಾಮೀಣ ಘಟಕದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.