ವೀರ ರಾಣಿ ಚೆನ್ನಮ್ಮಳಿಗೆ ನಮನ್ ಸಲ್ಲಿಸಿ ಕಿತ್ತೂರ್ ಉತ್ಸವಕ್ಕೆ ಅದ್ದೂರಿ ಚಾಲನೆ
ಬೆಳಗಾವಿ: ಕಿತ್ತೂರು ವಿಜಯೋತ್ಸವದ ವೀರಜ್ಯೋತಿಯನ್ನು ಅದ್ದೂರಿಯಿಂದ ಬರಮಾಡಿಕೊಂಡು ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಲಾಯಿತು.
ಸಂಪ್ರದಾಯದಂತೆ ಚನ್ನಮ್ಮನ ಸಮಾಧಿ ಸ್ಥಳಕ್ಕೆ ನಮನ ಸಲ್ಲಿಸಿ ಜಿಲ್ಲೆಯಾದ್ಯಂತ ಸಂಚರಿಸಿದ ವೀರಜ್ಯೋತಿಯನ್ನು ಇಂದು ಕಿತ್ತೂರಿನಲ್ಲಿ ಬರಮಾಡಿಕೊಂಡರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಅಮಟೂರ ಬಾಳಪ್ಪರವರಿಗೆ ನಮನ ಸಲ್ಲಿಸಿ ಉತ್ಸವಕ್ಕೆ ಅದ್ದೂರಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಸದರಾದ ಮಂಗಳಾ ಅಂಗಡಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಶಾಸಕರಾದ ಮಹಾಂತೇಶ ದೊಡ್ಡಗೌಡರ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಈ ಉತ್ಸವದಲ್ಲಿ ಅನೇಕ ನೃತ್ಯ ಮತ್ತು ಸಂಗೀತ ಕಲಾವಿದರು ಪಾಲ್ಗೊಂಡಿದ್ದು ವೀರ ರಾಣಿ ಚನ್ನಮ್ಮನ ಶೌರ್ಯ, ಸಾಹಸವನ್ನು ಗುಣಗಾನ ಮಾಡಿದ್ದಾರೆ.