Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಕಿತ್ತೂರು ಉತ್ಸವನನ್ನು ರಾಜ್ಯಮಟ್ಟದ ಉತ್ಸವ ಎಂದು ಘೋಷಿಸಲು ಸೂಕ್ತ ಕ್ರಮ :ಬೊಮ್ಮಾಯಿ

localview news

ಬೆಳಗಾವಿ: ಎರಡು ದಿನಗಳ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ ಮುಂಬೈ-ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದ್ದು. ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಮುಂಬೈ-ಕರ್ನಾಟಕ ಪ್ರಾಂತ್ಯವನ್ನು ಕಿತ್ತೂರು-ಕರ್ನಾಟಕ ಎಂದು ಘೋಷಿಸುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರಕಟಿಸಿದರು.

ಕೆಲವು‌ ವರ್ಷಗಳ‌ ಹಿಂದೆ ವೀರಜ್ಯೋತಿಯು ಬೆಳಗಾವಿ ಜಿಲ್ಲೆ ಮಾತ್ರವಲ್ಲದೆ ಇಡೀ ಕರುನಾಡು ಸಂಚರಿಸುತ್ತಿತ್ತು ಹಾಗೆಯೇ ಮುಂದಿನ ಉತ್ಸವ ಸಂದರ್ಭದಲ್ಲಿ ವೀರಜ್ಯೋತಿಯು ರಾಜ್ಯದಾದ್ಯಂತ ಸಂಚರಿಸುವಂತೆ ಮಾಡಲು ಅಧಿಕಾರಿಗಳಿಗೆ ಬೊಮ್ಮಾಯಿ ಆದೇಶ ನೀಡಿದರು.

ಬ್ರಿಟೀಷರ ವಿರುದ್ಧ ಹೋರಾಟಕ್ಕೆ ನಿಂತ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮ ಇಂದಿನ ಯುವ ಸಮುದಾಯ ಹಾಗೂ ಮಹಿಳೆಯರಿಗೆ ಪ್ರೇರಣೆಯಾಗಿದ್ದಾರೆ. ಸತ್ಯ, ನ್ಯಾಯ‌ ಹಾಗೂ ದೇಶಕ್ಕಾಗಿ ಹೋರಾಡಲು ನಾವು ಸಂಕಲ್ಪ ಮಾಡಬೇಕಿದೆ. ದೇಶವನ್ನು ಆಂತರಿಕ ಮತ್ತು ‌ಬಾಹ್ಯಶಕ್ತಿಗಳಿಂದ ರಕ್ಷಿಸಬೇಕಿದೇ ಎಂದು ಹೇಳಿದರು.

ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಉಮೇಶ್ ಕತ್ತಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ಸಚಿವ ಮುರುಗೇಶ್ ನಿರಾಣಿ, ವಿಧಾನಪರಿಷತ್ತಿನ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ವಿಧಾನಸಭೆ ಉಪ ಸಭಾಧ್ಯಕ್ಷ ಆನಂದ ಮಾಮನಿ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಬೆಳಗಾವಿ ಸಂಸದರಾದ ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅನಿಲ್ ಬೆನಕೆ, ಶಾಸಕ ಮಹಾಂತೇಶ‌ ಕೌಜಲಗಿ, ಮತ್ತಿತರರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.