Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಡಿಜಿಟಲ್ ಲೈಬ್ರರಿ ನಿರ್ಮಾಣಕ್ಕೆ ಭೂಮಿ ಪೂಜೆ

localview news

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿ‌ ಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನೂತನ ಡಿಜಿಟಲ್ ಲೈಬ್ರರಿ ಕಟ್ಟಡ ಹಾಗೂ‌ ಅಡುಗೆ ಮನೆಯ ನಿರ್ಮಾಣದ ಸಲುವಾಗಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿದರು.

ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಅನುದಾನದ ವತಿಯಿಂದ 45 ಲಕ್ಷ ರೂ, ಮಂಜೂರಾಗಿದೆ. ಡಿಜಿಟಲ್ ಲೈಬ್ರರಿ ನಿರ್ಮಾಣಕ್ಕೆ 40 ಲಕ್ಷ ರೂ ಹಾಗೂ ಅಡುಗೆ ಮನೆ ನಿರ್ಮಾಣಕ್ಕೆ 5 ಲಕ್ಷ ರೂ ನಿಗದಿಯಾಗಿದೆ.

ಈ ಡಿಜಿಟಲ್ ಲೈಬ್ರರಿ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗಾಗಿ ನಿರ್ಮಿಸಲಾಗುತ್ತಿದ್ದು, ಒಳ್ಳೆಯ ಗುಣಮಟ್ಟದ ವಸ್ತುಗಳನ್ನು ಉಪಯೋಗಿಸಿ ನಿರ್ಮಾಣ ಮಾಡುವಂತೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುತ್ತಿಗೆದಾರರಿಗೆ ಸೂಚಿಸಿಸಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ಸಂಧ್ಯಾ ಪಾಟೀಲ, ಎಸ್ ಡಿ ಎಮ್ ಸಿ ಚೇರಮನ್ ಸಿದ್ದರಾಯಿ ಬೆಳಗಾವಿ, ಜಯರಾಮ ಪಾಟೀಲ, ಸದೆಪ್ಪ ರಾಜಕಟ್ಟಿ, ಕೋಲಕಾರ, ಸದ್ದಾಮ್ ಮುಲ್ಲಾ, ಅಡಿವೆಪ್ಪ ಹತ್ತರಗಿ, ಶಾಲೆಯ ಮುಖ್ಯೋಪಾಧ್ಯಾಯರು, ಸಿಬ್ಬಂದಿಯವರು ಉಪಸ್ಥಿತರಿದ್ದರು.