Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಎರಡು ಕ್ಷೇತ್ರದ ಉಪಚುನಾವಣೆ ಸೋಲಿನ ಭೀತಿಯಲ್ಲಿ ಆಡಳಿತ ಸಚಿವರೇ ಪ್ರಚಾರ ನಡೆಸಿದ್ದಾರೆ: ಶಾಸಕ ಸತೀಶ

localview news

ಬೆಳಗಾವಿ: ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿನ ಭೀತಿಯಲ್ಲಿ ಇಡೀ ಸರಕಾರದ ಮಂತ್ರಿಗಳು ಪ್ರಚಾರ ನಡೆಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಗುರುವಾರ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ.

ಕಾಂಗ್ರೆಸ್‌ನ ಎಲ್ಲ ನಾಯಕರು, ಮಾಜಿ ಸಚಿವರು ಹಾಗೂ ಕಾರ್ಯಕರ್ತರು ಈ ಎರಡೂ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಶಕ್ತಿ ಮೀರಿ ಕಾಂಗ್ರೆಸ್ ಅಭ್ಯರ್ಥಿ ಗೆಲವು ಸಾಧಿಸಲು ಕೆಲಸ ಮಾಡಿದ್ದಾರೆ ಎಂದರು. ಸ್ವತಃ ನಾನೇ ಎರಡೂ ಕ್ಷೇತ್ರದಲ್ಲಿ ಪ್ರಚಾರ ನಡೆಸಿ ಬಂದಿದ್ದೇನೆ. ಕಾಂಗ್ರೆಸ್ ಅಭ್ಯರ್ಥಿಗಳ ಪರವಾದ ವಾತಾವರಣ ಇದೆ. ಅಂತಿಮವಾಗಿ ಮತದಾರರ ತೀರ್ಮಾನವೇ ನಿರ್ಣಾಯವಾಗಿದೆ. ಫಲಿತಾಂಶಕ್ಕಾಗಿ ಕಾಯಬೇಕಿದೆ ಎಂದರು.