Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆ ನಾಳೆ ನಡೆಸಲು ತೀರ್ಮಾನ: ಸಿಎಂ

localview news

ಬೆಂಗಳೂರು : ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ನಾಳೆ ನಡೆಸಲು ತೀಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪ್ರಕಟಿಸಿದರು. ಇಂದು ಮಧ್ಯಾಹ್ನ ಕಂಠೀರವ ಕ್ರೀಡಾಂಗಣದಲ್ಲಿ ಪುನೀತ್ ಅವರ ಸಹೋದರರಾದ ಶಿವರಾಜ್ ಕುಮಾರ್ ಮತ್ತ ರಾಘವೇಂದ್ರ ರಾಜ್ ಕುಮಾರ್ ಅವರೊಂದಿಗೆ ಈ ಬಗ್ಗೆ ಇಂದು ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದರು.

ಪುನೀತ್ ಅವರ ಪುತ್ರಿ ಈಗಾಗಲೇ ಬೆಂಗಳೂರಿನ ವಿಮಾನವನ್ನು ಹತ್ತಿದ್ದು, ಇಂದು ಸಂಜೆ 6.00 ರ ವೇಳೆಗೆ ಆಗಮಿಸಲಿದ್ದಾರೆ. ಸಂಜೆಯ ನಂತರ ಅಂತ ಸಂಸ್ಕಾರ ಮಾಡುವುದು ಸವಾಲಿನ ಸಂಗತಿಯಾಗಿರುವುದರಿಂದ ಹಾಗೂ ಅಪ್ಪು ಅವರ ಅಂತಿಮ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಅವಕಾಶ ಮಾಡಿಕೊಡಲು ನಾಳೆ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅಪ್ಪು ಅವರ ಅಂತಿಮ ದರ್ಶನಕ್ಕೆ ಹೆಚ್ಚಿನ ಜನರು ಆಗಮಿಸುತ್ತಿದ್ದಾರೆ. ನಾಳೆವರೆಗೂ ದರ್ಶನಕ್ಕೆ ಅವಕಾಶವಿರುವುದರಿಂದ ಜನರು ಸಮಾಧಾನದಿಂದ ಬರಬಹುದಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಜನರು ಸಹಕರಿಸುವಂತೆ ಮನವಿ ಮಾಡಿದರು.