Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ದೊಡ್ಮನೆ ಹುಡಗ ಯುವರತ್ನನಿಗೆ ಕಣ್ಣೀರಿನ ವಿದಾಯ

localview news

ಬೆಂಗಳೂರು:ರಾಷ್ಟ್ರಪ್ರಶಸ್ತಿ ವಿಜೇತ ನಟ, ಪವರಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಭಾನುವಾರ ನಸುಕಿನ‌ ಜಾವ ನೆರವೆರಿತು.

ಬೆಂಗಳೂರಿನ ಕಂಠೀರವ ಸ್ಟೂಡಿಯೊದಲ್ಲಿ ವರನಟ ಡಾ.ರಾಜಕುಮಾರ್ ಹಾಗೂ ತಾಯಿ ಪಾರ್ವತಮ್ಮ ರಾಜ್‍ಕುಮಾರ್ ಸಮಾಧಿಯ ಪಕ್ಕದಲ್ಲಿ ಪುನೀತ್ ರಾಜ್‍ಕುಮಾರ್ ಅವರ ಅಂತ್ಯಕ್ರಿಯೆಯ ವಿಧಿ ವಿಧಾನದ ಕಾರ್ಯಕ್ರಮವನ್ನು ರಾಘವೇಂದ್ರ ರಾಜ್ ಕುಮಾರ್ ಅವರ ಹಿರಿಯ ಪುತ್ರ ನೆರವೆರಿಸಿದರು.

ಕಂಠೀರವ ಸ್ಟೂಡಿಯೊ ಆವರಣದ ಹೊರಗಡೆ ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಪುನೀತ್ ರಾಜ್‍ಕುಮಾರ್ ಅವರ ಅಂತಿಮ ದರ್ಶನ ಪಡೆದು ಅಂತ್ಯಕ್ರಿಯೆ ಮುಗಿಯುವವರೆಗೂ ಸಾಕ್ಷಿಯಾಗಿದ್ದರು. ಪುನೀತ್ ಅಂತ್ಯಕ್ರಿಯೆಯಲ್ಲಿ ಕೇವಲ ಕುಟುಂಬಸ್ಥರ ಹಾಗೂ ಗಣ್ಯರಿಗೆ ಮಾತ್ರ ಅವಕಾಶ ನೀಡಲಾಗಿತ್ತು.

ಮಂಗಳವಾರ ಪುನೀತ್ ನಿಧನದ ಐದನೇ ದಿನಕ್ಕೆ ಹಾಲು ತುಪ್ಪ ಬಿಡುವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸರಕಾರ ಸಾರ್ವಜನಿಕರು ಹಾಗೂ ಅಪಾರ ಪ್ರಮಾಣದ ಅಭಿಮಾನಿಗಳು ಪುನೀತ್ ರಾಜ್‍ಕುಮಾರ್ ಅಂತ್ಯಕ್ರಿಯೆಗೆ ಸಹಕರಿಸಿದ್ದಕ್ಕೆ ಪುನೀತ್ ರಾಜ್‍ಕುಮಾರ್ ಹಿರಿಯ ಸಹೋದರ ರಾಘವೇಂದ್ರ ರಾಜ್ ಕುಮಾರ್ ಧನ್ಯವಾದಗಳನ್ನು ತಿಳಿಸಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಪುನೀತ್ ರಾಜಕುಮಾರ ಧರ್ಮ ಪತ್ನಿಗೆ ರಾಷ್ಟ್ರ ಧ್ವಜ‌ ಹಸ್ತಾಂತರಿಸಿದರು.