ಸಿದ್ದರಾಮಯ್ಯ ಪ್ರತಿಕೃತಿ ದಹಿಸಿದ ಬಿಜೆಪಿ
ಬೆಳಗಾವಿ:ಹೊಟ್ಟೆ ಪಾಡಿಗಾಗಿ ದಲಿತರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದು ಹೇಳಿದರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿ ಬುಧವಾರ ನಗರದ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ವಿರೋಧ ಪಕ್ಷದ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಆರೋಪ ಮಾಡಲು ಯಾವುದೇ ವಿಷಯ ಇಲ್ಲ.ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡರೂ ಸಿದ್ದರಾಮಯ್ಯ ಮಾತ್ರ ಉಡಾಫೆಯಿಂದ ವರ್ತಿಸುತ್ತಿರುವುದು ದುರ್ದೈವದ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹೊಟ್ಟೆಯ ಪಾಡಿಗಾಗಿ ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಗೆ ಬಂದಿದ್ದಾರೆ. ಕಾಂಗ್ರೆಸ್ ಬಂದು ಜಿ.ಪರಮೇಶ್ವರ, ಮಲ್ಲಿಕಾರ್ಜುನ ಖರ್ಗೆ ಅವರಂಥ ಹಿರಿಯ ನಾಯಕರನ್ನು ಮೂಲೆಗೂಂಪು ಮಾಡಿರುವ ನೀವು ಎಂದಿಗೂ ದಲಿತರ ಏಳಿಗೆ ಬಯಸಿಲ್ಲ. ಇಂಥ ಸಂದರ್ಭದಲ್ಲಿ ಉಡಾಫೆ ಹೇಳಿಕೆ ನೀಡಿರುವುದನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.
ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ, ಬಿಜೆಪಿ ಮುಖಂಡರಾದ ಸಂಜಯ ಪಾಟೀಲ, ಶಶಿ ಪಾಟೀಲ, ಪೃಥ್ವಿ ಸಿಂಗ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.