Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಕಿತ್ತೂರು-ಕರ್ನಾಟಕ ಘೋಷಣೆ: ಬೆಳಗಾವಿಯಲ್ಲಿ ಸಂಭ್ರಮಾಚರಣೆ

localview news

ಬೆಳಗಾವಿ:ಮುಂಬಯಿ-ಕರ್ನಾಟಕ ಪ್ರದೇಶವನ್ನು ಕಿತ್ತೂರು-ಕರ್ನಾಟಕ ಎಂದು ಸರಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಸಂಭ್ರಮಾಚರಣೆ ನಡೆಯಿತು.

ಸೋಮವಾರ ‌ನಡೆದ ಸಚಿವ ಸಂಪುಟ ಸಭೆಯಲ್ಲಿ ಕಿತ್ತೂರು-ಕರ್ನಾಟಕ ಘೋಷಣೆಯ ನಿರ್ಧಾರ ಪ್ರಕಟಿಸಿದ ಬಳಿಕ ಸಂಜೆ ಸಂಭ್ರಮಾಚರಿಸಲಾಯಿತು.

ಬೆಳಗಾವಿ ಸಂಸದರಾದ ಮಂಗಲ ಅಂಗಡಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹಾಗೂ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಅವರು ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ‌ ಮಾತನಾಡಿದ ಗಣ್ಯರು, ಈ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಸರಕಾರ ಈಡೇರಿಸಿದೆ ಎಂದು ಸಂತಸವನ್ನು ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಕಿತ್ತೂರು ಉತ್ಸವದಲ್ಲಿ ನೀಡಿದ ಭರವಸೆಯನ್ನು ಈಡೇರಿಸಿರುವುದಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು.ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಕೂಡ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಸಂಭ್ರಮಾಚರಣೆ ‌ನಡೆಸಿದರು.