ಪವರ್ ಸೆಂಟರ್ ಬೆಳಗಾವಿ ವಿಧಾನ ಪರಿಷತ್ ಚುನಾವಣೆಯಲ್ಲಿ ಯಾರಿಗೆ ಟಿಕೆಟ್...?
ಬೆಳಗಾವಿ:ರಾಜ್ಯದ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ಬೆಳಗಾವಿಯಿಂದ ಎರಡೂ ಸ್ಥಾನಗಳಿಗೆ ಸ್ಪರ್ಧಿಸಲು ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ.
ಬೆಳಗಾವಿ ಲೋಕಸಭಾ ಉಪಚುನಾವಣೆ ಹಾಗೂ ಮಹಾನಗರ ಪಾಲಿಕೆಯ ಚುನಾವಣೆ ಬಳಿಕ ಎದುರಾಗಿರುವ ವಿಧಾನ ಪರಿಷತ್ ಚುನಾವಣೆಯ ಮೇಲೆ ಈಗ ಎಲ್ಲರ ಕಣ್ಣು. ಜಿಲ್ಲೆಯಲ್ಲಿ ಬಿಜೆಪಿಯಿಂದ ಮಹಾಂತೇಶ ಕವಟಗಿಮಠ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಚುನಾವಣೆಗೆ ಸಕಲ ಸಿದ್ದತೆ ಮಾಡಿಕೊಂಡಿರುವ ಅವರು ಈಗಾಗಲೇ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಅದರಂತೆ ಬಿಜೆಪಿ ವಲಯದಲ್ಲಿ ತೆರೆಮರೆಯಲ್ಲಿ ಮತ್ತೊಂದಿಷ್ಟು ಹೆಸರುಗಳು ತೆಲಿ ಬರುತ್ತಿದ್ದು, ಅಂತಿಮವಾಗಿ ಬಿಜೆಪಿ ಹೈ ಕಮಾಂಡ್ ಯಾರಿಗೆ ಮಣೆ ಹಾಕುತ್ತದೆ ಎಂದು ಈಗಲೇ ಹೇಳಲು ಬರುವುದಿಲ್ಲ.
ವಿವೇಕರಾವ್ ಪಾಟೀಲ ಪಕ್ಷೇತರ ಅಭ್ಯರ್ಥಿಯಾಗಿ ಕಳೆದ ಬಾರಿ ಸ್ಪರ್ಧೆ ನಡೆಸಿ ಗೆಲವು ಸಾಧಿಸಿದ್ದರು. ಕಾಂಗ್ರೆಸ್ ನಲ್ಲಿಯೂ ಚಿಕ್ಕೋಡಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ, ವಿನಯ ನಾವಲಗಟ್ಟಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.
ಒಟ್ಟಿನಲ್ಲಿ ರಾಜಕೀಯ ಪವರ್ ಸೆಂಟರ್ ಎಂದು ಕರೆಸಿಕೊಳ್ಳುವ ಬೆಳಗಾವಿಯಲ್ಲಿ ಸದ್ದು ಗದ್ದಲ ಇದಲ್ಲದೆ ವಿಧಾನ ಪರಿಷತ್ ಚುನಾವಣೆಯ ಟಿಕೆಟ್ ಪಡೆಯಲು ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ತೆರೆಮರೆಯ ಆಟ ಜೋರಾಗಿ ನಡೆದಿದೆ.