Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ನೂತನ‌ ಜಿಲ್ಲಾಧಿಕಾರಿ ವೆಂಕಟೇಶಕುಮಾರ ಅಧಿಕಾರ ಸ್ವೀಕಾರ

localview news

ಬೆಳಗಾವಿ:ಬೆಳಗಾವಿಯ ನೂತನ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ವರ್ಗಾವಣೆಗೊಂಡಿದ್ದಾರೆ.ಅಧಿಕಾರ ಸ್ವೀಕರಿಸಿದ ನೂತನ ಜಿಲ್ಲಾಧಿಕಾರಿಗಳು, ಪರಿಷತ್ ಚುನಾವಣೆ ಸಿದ್ಧತೆ ಹಾಗೂ ನಾಮಪತ್ರ ಸ್ವೀಕಾರ ಪ್ರಕ್ರಿಯೆ ಕುರಿತು ಮಾಹಿತಿಯನ್ನು ಪಡೆದುಕೊಂಡರು.

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಉಪಸ್ಥಿತರಿದ್ದರು.

ಕಲಬುರ್ಗಿಯ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ವೆಂಕಟೇಶಕುಮಾರ್ ಅವರನ್ನು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿಯ ಜಿಲ್ಲಾಧಿಕಾರಿಯಾಗಿ ಸರಕಾರ ವರ್ಗಾವಣೆಗೊಳಿಸಿದೆ.