ಕೃಷಿ ಕಾಯ್ದೆ ಹಿಂಪಡೆದಿದ್ದು ಆಶ್ಚರ್ಯಕರ ಬೆಳವಣಿಗೆ: ಶಾಸಕ ಸತೀಶ
ಬೆಳಗಾವಿ : ಕೃಷಿ ಕಾಯ್ದೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಿಂಪಡೆದಿರುವುದು ಆಶ್ಚರ್ಯ ಬೆಳವಣಿಗೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಶುಕ್ರವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಮೂರು ಕೃಷಿ ಮಸೂದೆ ಕಾಯ್ದೆಯನ್ನು ಹಿಂಪಡೆಯುತ್ತಾರೆ ಎಂದು ಅಂದುಕೊಂಡಿರಲಿಲ್ಲ.
ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಹೋರಾಟಕ್ಕೆ ಗೌರವ ಕೊಟ್ಟಿದ್ದಾರೆ. ಇದು ರೈತರ ಹೋರಾಟಕ್ಕೆ ಸಿಕ್ಕ ಜಯ. ಕಳೆದೊಂದು ವರ್ಷದಿಂದ ಮಳೆ, ಚಳಿ ಎನ್ನದೆ ಹೋರಾಟ ನಡೆಸಿದ್ದರು ಎಂದರು. ದೇಶದ ತುಂವ ಹರಿಯಾಣ, ಪಂಜಾಬ್, ರಾಜಸ್ಥಾನ ಕಡೆಗಳಲ್ಲಿ ಕೃಷಿ ಮಸೂದೆ ಕಾಯ್ದೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ಹೀಗಾಗಿ ಇದು ಜನರ ಐತಿಹಾಸಿಕ ಗೆಲವು. ಇದರಲ್ಲಿ ಬಿಜೆಪಿಯವರು ಒಳ್ಳೆಯ ಕೆಲಸ ಮಾಡಿದ್ದಾರೆ ಎನ್ನಲು ಸಾದ್ಯವಿಲ್ಲ. ಜನರ ಒತ್ತಡಕ್ಕೆ ಮಣಿದು ಮಾಡಿದ್ದಾರೆ ಎಂದು ಹೇಳಿದರು.