ನನ್ನ ಸ್ಪರ್ಧೆಯಿಂದ ಬಿಜೆಪಿಗೆಯೇ ಲಾಭ: ಲಖನ್
ಬೆಳಗಾವಿ: ಜನರ, ಕಾರ್ಯಕರ್ತರ ಹಾಗೂ ಮತದಾರರ ಬೆಂಬಲ ಇದೆ. ಅವರ ಆಶೀರ್ವಾದಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದು ಉದ್ಯಮಿ ಲಖನ್ ಜಾರಕಿಹೊಳಿ ಹೇಳಿದರು. ಮಂಗಳವಾರ ಸರ್ದಾರ್ ಮೈದಾನದಲ್ಲಿ ತಮ್ಮ ಅಪಾರ ಅಭಿಮಾನಿ ಬಳಗದಿಂದ ರ್ಯಾಲಿ ನಡೆಸಿ ನಗರದ ಚನ್ನಮ್ಮ ವೃತ್ತದಲ್ಲಿರುವ ಗಣೇಶ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ನನ್ನ ಸ್ಪರ್ಧೆಯಿಂದ ಬಿಜೆಪಿ ಅಭ್ಯರ್ಥಿಗೆ ನಷ್ಟವಾಗುತ್ತಿದೆ ಎಂದು ಕೆಲವರು ಅಪ ಪ್ರಚಾರ ನಡೆಸುತ್ತಿದ್ದಾರೆ.
ಆದರೆ ನಾನು ಸ್ಪರ್ಧೆ ಮಾಡುತ್ತಿರುವುದರಿಂದ ಬಿಜೆಪಿ ಅಭ್ಯರ್ಥಿಗೆ ಲಾಭವಾಗುತ್ತದೆ. ನಾನು ಬಿಜೆಪಿ ಬಂಡಾಯ ಅಭ್ಯರ್ಥಿ ಅಲ್ಲ. ನಾನು ಟಿಕೆಟ್ ಕೇಳಿಯೇ ಇಲ್ಲ. ಆದ್ದರಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದರು. ಮತದಾರರಲ್ಲಿ ವಿನಂತಿ ಮಾಡಿಕೊಳ್ಳುತ್ತೇನೆ. ಈ ಬಾರಿ ನನಗೆ ಮತ ನೀಡಿ ಗೆಲ್ಲಿಸಿ ಕೊಡಬೇಕು ಎಂದು ಮನವಿ ಮಾಡಿಕೊಂಡರು.