Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ರೈತರ ಪಟ್ಟು: ಶಾಸಕರ ಮನೆಯ ಮುಂದೆ ರಸ್ತೆ ತಡೆದು ಧರಣಿ

localview news

ಬೆಳಗಾವಿ: ರೈತರ ಕಬ್ಬಿನ ಬಾಕಿ ಬಿಲ್ ಹಾಗೂ ಶೇರುದಾರರ ಬಾಂಡ್ ವಿತರಣೆ ಮಾಡಬೇಕೆಂದು ಒತ್ತಾಯಿಸಿ ರಾಮದುರ್ಗದ ಶಾಸಕ ಮಹದೇವಪ್ಪ ಯಾದವಾಡ ಅವರ ಮನೆ ಮುಂದೆ ರೈತರು ಇಂದು ಪ್ರತಿಭಟನೆ ನಡೆಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಉದುಪುಡಿ ಗ್ರಾಮದಲ್ಲಿರುವ ಶಿವಸಾಗರ ಸಕ್ಕರೆ ಕಾರ್ಖಾನೆ ಸಂಬಂಧಿಸಿದ 24 ಕೋಟಿ ಕಬ್ಬಿನ ಬಾಕಿ ಬಿಲ್ ಹಾಗೂ ಎಚ್ ಎನ ಟಿ ಬಿಲ್ಲ ಹಾಗೂ ಶೇರುದಾರರು ಮತ್ತು ನೆರೆ ಸಂತ್ರಸ್ತರ ಪರಿಹಾರ ಬರಪರಿಹಾರ 2013ರಿಂದ 2016ರ ವರೆಗೆ ಕೊಡಬೇಕು 85000 ಬಾಂಡಳಲ್ಲಿ 48000 ಬಾಂಡುಗಳನ್ನು ಮಾತ್ರ ಕೊಟ್ಟಿದ್ದು ಇನ್ನುಳಿದ 37000 ಹಣ ತುಂಬಿದ ಶೇರುದಾರರಿಗೆ ಕೊಟ್ಟಿರುವುದಿಲ್ಲ ಕೂಡಲೇ ಪಾವತಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದಿಂದ ಶಾಸಕರ ಮನೆ ಮುಂದೆ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರಸ್ತೆ ತಡೆದ ಪರಿಣಾಮ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು.

ಇದರಿಂದ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಈ ಎಲ್ಲಾ ಬೇಡಿಕೆ ಈಡೇರುವವರೆಗೂ ನಾವು ಶಾಸಕರ ಮನೆಯ ಮುಂದೆ ಕುಳಿತು ಪ್ರತಿಭಟನೆ ಮಾಡುತ್ತೇವೆ ಎಂದು ರೈತ ಮುಖಂಡರು ಆಗ್ರಹಿಸಿದರು. ಕೂಡಲೇ ಶಾಸಕ ಮಹಾದೇವಪ್ಪ ಯಾದವಾಡ ಸ್ಥಳಕ್ಕೆ ಭೇಟಿ ನೀಡಿ ರೈತರನ್ನು ಮನ ಒಲಿಸುವ ಪ್ರಯತ್ನ ಮಾಡಿದರು.