ರಮೇಶ ಜಾರಕಿಹೊಳಿ ಬಿಜೆಪಿಗೆ ಮೋಸ ಮಾಡಲ್ಲ: ಸಚಿವ ಈಶ್ವರಪ್ಪ
ಬೆಳಗಾವಿ: ಯಾವುದೇ ಕಾರಣಕ್ಕೂ ರಮೇಶ ಜಾರಕಿಹೊಳಿ ಬಿಜೆಪಿಗೆ ಮೋಸ ಮಾಡಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಭಾನುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯುತ್ತಿವೆ. ಪಂಚಾಯತ್ ರಾಜ್ ಇಲಾಖೆಯ ನರೇಗಾ ಕಾಮಗಾರಿಯನ್ನು ಸಂಕಷ್ಟ ವೇಗವಾಗಿ ಮಾಡಲಾಗುತ್ತಿದೆ. ವಿರೋಧ ಪಕ್ಷದವರು ಅಭಿವೃದ್ಧಿ ಆಗಿಲ್ಲ ಎನ್ನುವ ಆರೋಪ ತಳ್ಳಿ ಹಾಕಿದರು
. ರಮೇಶ ಜಾರಕಿಹೊಳಿ ಅವರು ಬಿಜೆಪಿಗೆ ಮೋಸ ಮಾಡುತ್ತಿದ್ದಾರೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ರಮೇಶ ಜಾರಕಿಹೊಳಿ ಕಾಂಗ್ರೆಸ್ ನಲ್ಲಿ ಇದ್ದಾಗ ಯಾಕೆ ಕಾಂಗ್ರೆಸ್ ಗೆ ಮೋಸ ಮಾಡ್ತಿದ್ದಾರೆ ಎಂದು ಹೇಳಲಿಲ್ಲ ಎಂದು ಪ್ರಶ್ನಿಸಿದ ಅವರು, ಸತ್ಯವನ್ನು ಯಾವಾಗಲು ಸತ್ಯವಾಗಿಯೇ ಹೇಳಿದರೇ ಸತ್ಯ. ಅದನ್ನು ಬಿಟ್ಟು ತಮಗೆ ಬೇಕಾದ ಹಾಗೆ ತಿರುಗಿಸುತ್ತಾ ಹೋದರೆ, ಯಾವುದೇ ಕಾರಣಕ್ಕೂ ರಮೇಶ ಜಾರಕಿಹೊಳಿ ಬಿಜೆಪಿಗೆ ಮೋಸ ಮಾಡಲ್ಲ ಎಂದರು.