Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಡಿ.ಕೆ.ಶಿವಕುಮಾರ ನನ್ನ ನಡುವೆ ವಾರ್ ಆಗ್ಲಿ ಫಲಿತಾಂಶದ ಆದ ಮೇಲ ಎಲ್ಲಾ ಹೇಳುತ್ತೇನೆ: ರಮೇಶ

localview news

ಬೆಳಗಾವಿ: ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಗೆಲ್ಲಬೇಕು.ಜಿಲ್ಲೆಯ ಮೂಲೆ ಮೂಲೆಯಲ್ಲಿ ಪ್ರಚಾರ ಮಾಡುತ್ತಿದ್ದೇವೆ ಎಂದ ಅವರು ಮಾಧ್ಯಮವರ ಬೇಕಿರೋ ಉತ್ತರ ಇಂದು ಸಿಗಲ್ಲ.

ಪರಿಷತ್ ಫಲಿತಾಂಶ ದಿನ ಡಿ14ರಂದು ಡಿಕೆಶಿ ಪ್ರತಿ ಶಬ್ದಕ್ಕೆ ಉತ್ತರ ಸಿಗಲಿದೆ. ಅತ್ಯಂತ ಕಠೊರವಾಗಿ ಉತ್ತರ ಕೊಡುತ್ತೇನೆ ಎಂದರು. 1985 ರಿಂದ ಇಲ್ಲಿಯ ವರೆಗೆ ನಡೆದ ಎಲ್ಲಾ ವಿಚಾರ ಬಹಿರಂಗ ಮಾತನಾಡುತ್ತೇನೆ. ಆಗ ನನ್ನ ವ್ಯಕ್ಯಿತ್ವ ಏನು, ಡಿಕೆಶಿ ವ್ಯಕ್ತಿತ್ವ ಏನು ಎಂದು ಹೇಳುತ್ತೇನೆ.ಒಪನ್ ವಾರ್ ಆಗಲಿ ಅಂದು.

ಫಲಿತಾಂಶದ ದಿನ ಎಲ್ಲಕ್ಕೂ ಉತ್ತರ ಕೊಡುತ್ತೇನೆ ಎಂದು ಕಾರವಾಗಿ ಉತ್ತರಿಸಿದರು‌. ಡಿಕೆಶಿ ಕುಟುಂಬ, ಜಾರಕಿಹೊಳಿ ಕುಟುಂಬ ಎನಿತ್ತು ಎಲ್ಲಾ ಬಹಿರಂಗವಾಗಿ ಹೇಳುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ದೆಹಲಿ ವರಿಷ್ಠರ ಆಶೀರ್ವಾದ ನನ್ನ ಮೇಲೆ ಇರುವುದರಿಂದ ದೆಹಲಿ ವರಿಷ್ಠರು ಇದ್ದಾರೆ ಎಂದು ನಾನು ಜೀವಂತ ಇದ್ದೇನೆ. ಇಲ್ಲವೇ ಇಷ್ಟೊತ್ತಿಗೆ ನನ್ನನು ಮುಗಿಸಿ ಬಿಡುತ್ತಿದ್ದರು.

ಇಷ್ಟೊತ್ತಿಗೆ ನನ್ನ ವಿರುದ್ಧ ಷಡ್ಯಂತ್ರ ಮಾಡಿ ಮುಗಿಸಿ ಬಿಡುತ್ತಿದ್ದರು. ಸಂಘ ಪರಿವಾರದ ನಾಯಕರ ಬೆಂಬಲದಿಂದ ನಾಯಕನಾಗಿದ್ದಾನೆ. ಬ್ಲ್ಯಾಕ್ ಮೇಲ್ ಯಾರು ಮಾಡ್ತಾರೆ ಎಂದು 14 ನೇ ತಾರೀಕು ಹೇಳಿತ್ತೇನೆ. ಈಗ ಇದ್ದ ಎಂಎಲ್ಎ ಉಳಿಸಿಕೊಳ್ಳಿ ಆಮೇಲೆ ನೋಡೊಣ ಎಂದರು. 14 ರಂದು ಡಿಕೆಶಿ, ಜಾರಕಿಹೊಳಿ ವಾರ್ ಆಗಲಿ ನೋಡೊಣ. 2023ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ತರಲು ನಾವು ಪ್ರಯತ್ನ ಮಾಡುತ್ತೇವೆ ಎಂದರು.