Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಗೆಲುವಿಗಾಗಿ ನಾನಾ ರೀತಿಯ ಕಸರತ್ತು ನಡೆಸಿದ ಅಭ್ಯರ್ಥಿಗಳು ಯಾರ ಕೊರಳಿಗೆ ಗೆಲುವಿನ ಮಾಲೆ..?

localview news

ಬೆಳಗಾವಿ:ಸ್ಥಳೀಯ ಸಂಘ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಜೋರಾಗಿ ನಡೆಯುತ್ತಿದೆ. ಈ ರಣ ರಂಗದಲ್ಲಿ ಗೆಲುವಿನ ಮಾಲೆ ಯಾರಿಗೆ ಎನ್ನುವುದು ಮಾತ್ರ ನಿಗೂಢವಾಗಿದೆ.

ಬಿಜೆಪಿ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸೋಲಿಸಲು ರಣತಂತ್ರ ಹೆಣೆಯುತ್ತಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಗಲಿರುಳು ಕಾಲಿಗೆ ಚಕ್ರ ಕಟ್ಟಿಕೊಂಡು ಕ್ಷೇತ್ರದ ತುಂಬ ಮತದಾರರನ್ನು ತಮ್ಮತ್ತ ಸೆಳೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಕಳೆದ ಎರಡೂ ಬಾರಿ ಆಯ್ಕೆಯಾಗಿ ಸ್ಥಳೀಯ ಸಂಸ್ಥೆಗಳಿಗೆ ಸಾಕಷ್ಟು ಅನುದಾ‌ನ ಮಂಜೂರು ಮಾಡಿಸಿ ಅಭಿವೃದ್ಧಿ ಪಡಿಸಿದ್ದಾರೆ. ಇದನ್ನು ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಮತದಾರರಿಗೆ ಮನವರಿಕೆ ಮಾಡಿಕೊಡುತ್ತಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಚನ್ನರಾಜ ಹಟ್ಟಿಹೊಳಿ ಅವರಿಗೆ ಶಾಸಕಿ, ಸಹೋದರಿ ಲಕ್ಷ್ಮೀ ಹೆಬ್ಬಾಳ್ಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮನಮರಡಿ‌ ಶಾಸಕ ಸತೀಶ ಜಾರಕಿಹೊಳಿ ಪ್ರಚಾರ ನಡೆಸಿದ್ದಾರೆ.

ಇತ್ತ ಗೋಕಾಕ ಉದ್ಯಮಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದರಿಂದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಮತ ವಿಭಜನೆ ಆಗುವ ಆತಂಕ ಎದುರಾಗಿದ್ದು ಮಾತ್ರ ಸತ್ಯ.