Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ನಾಳೆ ಸಿದ್ದರಾಮಯ್ಯ ನೇತೃತ್ವದಲ್ಲಿ ಕೈ ಸಮಾವೇಶ

localview news

ರಾಯಬಾಗ:ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಭಾನುವಾರ ರಾಯಬಾಗದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.

ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ವಿರೋಧ ಪಕ್ಷದ ನಾಯಕ ಹಾಗು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಣಿಕ್ ಸಿಂಗ್ ಠಾಕೂರ, ಐವಾನ್ ಡಿಸೋಜ ಮೊದಲಾದವರು ಆಗಮಿಸಿ ಪಕ್ಷದ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಪರವಾಗಿ ಮತಯಾಚನೆ ಮಾಡಲಿದ್ದಾರೆ.ಕಾಂಗ್ರೆಸ್ ಪಕ್ಷದ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಕಾಂಗ್ರೆಸ್ ಸರಕಾರ ಆಡಳಿತ ಮಾಡಿದ ಸಮಯದಲ್ಲಿ ಪಂಚಾಯತ್ ರಾಜ್ಯಗಳಿಗೆ ಹೆಚ್ಚಿನ ಅಧಿಕಾರ ಮತ್ತು ಅನುದಾನವನ್ನು ನೀಡಲಾಗಿತ್ತು. ಸಿದ್ದರಾಮಯ್ಯ ಮುಖ್ಯ ಮಂತ್ರಿಗಳಾಗಿದ್ದಾಗ ಪಂಚಾಯತಗಳಿಗೆ ಹೆಚ್ಚಿನ ಸ್ವಾಯತ್ತತೆ ನೀಡಲಾಗಿತ್ತು. ಕೇಂದ್ರದಲ್ಲಿ ಮನಮೋಹನ್ ಸಿಂಗ್ ಪ್ರಧಾನ ಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಉದ್ಯೋಗ ಖಾತರಿ ಯೋಜನೆಯಂತಹ ಹಲವಾರು ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಕುಡಚಿ ಬ್ಲಾಕ್ ಪ್ರಧಾನ ಕಾರ್ಯದರ್ಶಿ ರಾಜು ಶಿರಗಾಂವೆ ಮಾತನಾಡಿ, ಕಾಂಗ್ರೆಸ್ ಪಕ್ಷವು ಬಡವರ ಪರ ಕೆಲಸ ಮಾಡುವ ಪಕ್ಷವಾಗಿದೆ. ಹಿಂದೆ ಆಡಳಿತ ಮಾಡಿದ ಕಾಂಗ್ರೆಸ್ ಪಕ್ಷದ ಮಂತ್ರಿಗಳು, ಮುಖ್ಯಮಂತ್ರಿಗಳು, ಪ್ರಧಾನಮಂತ್ರಿಗಳು ಬಡ ಜನರ ಕಲ್ಯಾಣಕ್ಕಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ . ಈ ಸಮಾವೇಶದಲ್ಲಿ ಹಾಲಿ ಕಾಂಗ್ರೆಸ್ ಪಕ್ಷದ ಶಾಸಕರು, ಮಾಜಿ ಶಾಸಕರು ಸೇರಿದಂತೆ ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಮಾವೇಶದ ಸ್ಥಳ ವೀಕ್ಷಣೆ ಮಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಭಾನುವಾರ ನಡೆಯಲಿರುವ ಕಾಂಗ್ರೆಸ್ ಸಮಾವೇಶದ ವೇದಿಕೆ ಸ್ಥಳ, ಸಮಾವೇಶದ ಪೂರ್ವಭಾವಿ ತಯಾರಿಗಳನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ವೀಕ್ಷಿಸಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಮಹೇಂದ್ರ ತಮ್ಮಣ್ಣವರ್, ಡಿ ಎಸ್ ನಾಯಕ್, ಮಾಜಿ ಶಾಸಕ ಶ್ಯಾಮ ಘಾಟಿಗೆ, ಅಪ್ಪಾಸಾಹೇಬ ಕುಲಗುಡೆ, ಬ್ಲಾಕ್ ಅಧ್ಯಕ್ಷ ಈರಗೌಡ ಪಾಟೀಲ್ ಸದಾಶಿವ ದೇಸಿಂಗೆ, ಮಹಾವೀರ ಮೋಹಿತೆ, ಸುಕುಮಾರ ಪಾಟೀಲ್, ಅರ್ಜುನ ಬಂಡಗಾರ್, ಬಿ ಎನ್ ಬಂಡಗಾರ್, ದಿಲೀಪ ಜಮಾಧಾರ್, ಹಾಜಿ ಮುಲ್ಲಾ, ಜಗದೀಶ್ ಯಲ್ಲೂರ, ಗಂಗಾಧರ್ ಕಾಂಬ್ಳೆ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.