Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಅತಿಥಿ ಉಪನ್ಯಾಸಕರಿಗೆ ಬೆಳಗಾವಿ ಅಧಿವೇಶನದಲ್ಲಿಯೇ ಸೇವಾಭದ್ರತೆ ಘೋಷಣೆಯಾಗಲಿ :ಡಾ.ರಾಜು ಕಂಬಾರ

localview news

ಬೆಳಗಾವಿ: ರಾಜ್ಯದ ಸರ್ಕಾರಿ ಪದವಿ ಮಹಾವಿದ್ಯಾಲಯಗಳಲ್ಲಿ ಹತ್ತು ಹದಿನೈದು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿರುವ ಅತಿಥಿ ಉಪನ್ಯಾಸಕರಿಗೆ ಬೆಳಗಾವಿಯಲ್ಲಿ ಜರುಗಲಿರುವ ಅಧಿವೇಶನದಲ್ಲಿಯೇ ಸೇವಾ ಭದ್ರತೆ ಘೋಷಣೆ ಮಾಡಬೇಕೆಂದು ಸರಕಾರವನ್ನು ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಬೆಳಗಾವಿ ಜಿಲ್ಲಾಧ್ಯಕ್ಷ ಡಾ.ರಾಜು ಕಂಬಾರ ಒತ್ತಾಯಿಸಿದ್ದಾರೆ.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ರವಿವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಸುಮಾರು 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,564 ಅತಿಥಿ ಉಪನ್ಯಾಸಕರು ಹತ್ತು ಹದಿನೈದು ವರ್ಷಗಳಿಂದ ಸೇವೆ ಸಲ್ಲಿಸುತ್ತ ಬಂದಿದ್ದಾರೆ. ಸೇವಾ ಭದ್ರತೆಗಾಗಿ ನಿರಂತರ ಹೋರಾಟವನ್ನು ಮಾಡಲಾಗುತ್ತಿದೆ. ಪ್ರಸ್ತುತ ಡಿಸೆಂಬರ 10 ತರಗತಿಗಳನ್ನು ಬಹಿಷ್ಕರಿಸಿ ಧಾರವಾಡದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ಕಾರ್ಯಾಲಯದ ಎದುರು ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ.

ಆದರೂ ಇದುವರೆಗೆ ಸರ್ಕಾರ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಯನ್ನು ಘೋಷಣೆ ಮಾಡಿಲ್ಲ. ಇದರಿಂದಾಗಿ ನೂರಾರು ಅತಿಥಿ ಉಪನ್ಯಾಸಕರ ಬದುಕು ಅತಂತ್ರ ಸ್ಥಿತಿಯಲ್ಲಿದೆ. ಕೆಲವರ ವಯೋಮಿತಿ ಮೀರಿ ಹೋಗಿದೆ. ಸರ್ಕಾರ ಇಂದಲ್ಲ ನಾಳೆ ನಮ್ಮ ಸೇವೆಯನ್ನು ಸಕ್ರಮಗೊಳಿಸಿ ಕಾಯಮಾತಿ ಮಾಡಿಕೊಳ್ಳುತ್ತಾರೆ

ಎಂಬ ಆತ್ಮವಿಶ್ವಾಸದೊಂದಿಗೆ ನೂರಾರು ಅತಿಥಿ ಉಪನ್ಯಾಸಕ ಕುಟುಂಬಗಳು ಜೀವ ಸೇವಿಸುತ್ತಿವೆ. ಮಾನ್ಯ ಮುಖ್ಯಮಂತ್ರಿಗಳು ಬೆಳಗಾವಿ ಅಧಿವೇಶನದಲ್ಲಿಯೇ ಅತಿಥಿ ಉಪನ್ಯಾಸಕರಿಗೆ ಸೇವಾ ಸೇವಾ ಭದ್ರತೆಯ ಘೋಷಣೆಯನ್ನು ಮಾಡಬೇಕು, ಅತಿಥಿ ಉಪನ್ಯಾಸಕರ ಆಧುನಿಕ ಜೀತಪದ್ಧತಿಗೆ ಮುಕ್ತಿ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಳ್ಳುತ್ತೇವೆ.

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಬೇಕು ಎಂಬ ನಿಟ್ಟಿನಲ್ಲಿ ಮಾನ್ಯ ವಿಧಾನ ಪರಿಷತ್‌ ಸದಸ್ಯರಾದ ಆಯನೂರು ಮಂಜುನಾಥ್ ಅವರ ಗೌರವಾಧ್ಯಕ್ಷತೆಯಲ್ಲಿ, ವಿಧಾನಪರಿಷತ್‌ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ರಾಜ್ಯದ ಎಲ್ಲಾ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರು ಉನ್ನತ ಶಿಕ್ಷಣ ಸಚಿವರಾದ ಡಾ.ಅಶ್ವತ್ ನಾರಾಯಣ್ ಸರ್ ಅವರಿಗೆ ಹಾಗೂ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಮತ್ತು ಒತ್ತಾಯಿಸಲಾಗಿದೆ.

ಪ್ರಸ್ತುತ ಬೆಳಗಾವಿಯಲ್ಲಿ ಜರುಗಲಿರುವ ಅಧಿವೇಶನದಲ್ಲಿ ಎಲ್ಲ ವಿಧಾನಪರಿಷತ್ ಸದಸ್ಯರು ಅತಿಥಿ ಉಪನ್ಯಾಸಕರಿಗೆ ಇದೇ ಅಧಿವೇಶನದಲ್ಲಿ ಭದ್ರತ ನೀಡಬೇಕೆಂದು ಒತ್ತಾಯಿಸಬೇಕೆಂದು ಈ ಮೂಲಕ ಅವರಲ್ಲಿ ವಿನಂತಿಸುತ್ತೇವೆ. ಟಿವಿ ಮಾಧ್ಯಮದಲ್ಲಿ ಹೇಳಿಕೆ ನೀಡಿದ ಮಾನ್ಯ ಮುಖ್ಯಮಂತ್ರಿಗಳು ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಯ ಘೋಷಣೆಯನ್ನು ಮಾಡಬೇಕೆಂದು ಕಂಬಾರ ಆಗ್ರಹಿಸಿದ್ದಾರೆ.

ಈ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ವಿಠಲ ಮಾಳವದೆ, ಜಿಲ್ಲಾ ಉಪಾಧ್ಯಕ್ಷೆ ಜಯಶ್ರೀ ಹಂಚಿನಮನಿ, ಕೆ.ಎನ್.ಕಾಂಬಳಿ, ಪ್ರಕಾಶ ಮಬನೂರ, ಖಜಾಂಚಿ ಡಾ. ಅಡಿವೆಪ್ಪ ಇಟಗಿ, ನೀಲಕಂಠ ಬೂಮನ್ನವರ, ಇದ್ದರು.