ಸಿಡಿದ್ದೇದ ರಾಯಣ್ಣನ ಅಭಿಮಾನಿಗಳು: ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಬೆಳಗಾವಿ: ಕನಕದಾಸ ಕಾಲೋನಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣಬ ಮೂರ್ತಿ ಭಗ್ನಗೊಳಿಸಿದ ಹಿನ್ನೆಲೆಯಲ್ಲಿ ರಾಯಣ್ಣನ ಅಭಿಮಾನಿಗಳು ಸಿಡಿದ್ದೇದ್ದಿದ್ದಾರೆ.
ನಗರದ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿರುವ ರಾಯಣ್ಣನ ಅಭಿಮಾನಿಗಳು ಕನಕದಾಸ ಕಾಲೋನಿಯ ರಾಯಣ್ಣನ ಮೂರ್ತಿ ಇದ್ದ ಸ್ಥಳಕ್ಕೆ ಯುವಕರು ಧಾವಿಸುತ್ತಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ ಏರ್ಪಡಿಸಿದ್ದಾರೆ.
ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಭಗ್ನಗೊಳಿಸಿರುವ ಕಿಡಿಗೇಡಿಗಳ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ರಾಯಣ್ಣನ ಅಭಿಮಾನಿಗಳು ಒತ್ತಾಯಿಸಿದ್ದಾರೆ.