ಡಿ.23ಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ: ಪೂಜಾರಿ
ಬೆಳಗಾವಿ :ಗೋಕಾಕ ವಿಧಾನ ಸಭಾ ಕ್ಷೇತ್ರದ ಜನರಿಗೆ ಸರ್ವಾಧಿಕಾರಿಯ ಬದಲಾವಣೆಯ ಬಯಸಿದ್ದಾರೆ. ಗುರುವಾರ 23 ರಂದು ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದೇನೆ ಎಂದು ಅಶೋಕ ಪೂಜಾರಿ ಹೇಳಿದರು. ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಗೋಕಾಕನ ಸರ್ವಾಧಿಕಾರಿ ಧೋರಣೆಯನ್ನು ತೋಲಗಿಸಲು ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿದ್ದೇನೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಗೋಕಾಕ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟುವ ಪ್ರಮಾಣಿಕ ಪ್ರಯತ್ನ ಮಾಡುವೆ ಎಂದರು.
ಲೋಕಸಭಾ ಉಪಚುನಾವಣೆಯ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಬೇಕಿತ್ತು. ಕಾರಣಾಂತರಗಳಿಂದ ವಿಳಂಬವಾಗಿತ್ತು.
ಕಾಂಗ್ರೆಸ್ ನ ಸಿದ್ಧಾಂತ ಒಪ್ಪಿಕೊಂಡು ಹಾಗೂ ನನ್ನ ಅಭಿಮಾನಿಗಳ ಜತೆಗೆ ಚರ್ಚಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿದರು.