ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತಾ ನೀಡುವಂತೆ ಒತ್ತಾಯ
ಬೆಳಗಾವಿ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಗುರುವಾರ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರ ಸಂಘ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಿದರು. ಹೊರ ಸಿಬ್ಬಂದಿಗಳ ಬಾಕಿ ವೇತನ ಮತ್ತು ಲಾಕ್ ಡೌನ್ ಅವಧಿಯ ವೇತನ ಕೂಡಲೇ ಸಂದಾಯ ಮಾಡಬೇಕು.
ಸೇವೆಯಿಂದ ಬಿಡುಗಡೆಗೊಳಿಸಲಾದ ಹಾಸ್ಟೆಲ್ ಹೊರ ಗುತ್ತಿಗೆ ಸಿಬ್ಬಂದಿಗಳನ್ನು ನಿವೃತ್ತಿಯ ವರೆಗೆ ಸೇವೆಯಲ್ಲಿ ಮುಂದುವರೆಸಿ, ಮೆಟ್ರಿಕ್ ನಂತರದ ವಸತಿ ನಿಲಯಗಳಲ್ಲಿ ಶೆ.25 ರಷ್ಟು ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ಒತ್ತಾಯಿಸಿದರು. ಕಡ್ಡಾಯವಾಗಿ ಸಿಬ್ಬಂದಿಗಳಿಗೆ ವಾರದ ರಜೆಯನ್ನು ಕೊಡಬೇಕು. ಇಎಸ್ ಐ ಮತ್ತು ಪಿಎಫ್ ಹಣವನ್ನು ಹೊರಗುತ್ತಿಗೆ ನೌಕರರ ಖಾತೆಗೆ ಹಾಕಬೇಕು.
ಎಲ್ಲಾ ಹಾಸ್ಟೆಲ್ ಹೊರ ಗುತ್ತಿಗೆ ಸಿಬ್ಬಂದಿಗಳಿಗೆ ನಿವೃತ್ತಿಯವರೆಗೆ ಸೇವಾ ಭದ್ರತೆ ಕೊಡಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ನಿತ್ಯಾನಂದ ಸ್ವಾಮಿ, ಭೀಮಶೆಟ್ಟಿ ಯಂಪಳ್ಳಿ, ಕೆ.ಹನುಮೇಗೌಡ, ಇ.ಆರ್.ಯಲ್ಲಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.