Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಚನ್ನರಾಜ ಹಟ್ಟಿಹೊಳಿಗೆ ಅಪೆಕ್ಸ್ ಬ್ಯಾಂಕ್ ನಿಂದ ಗೌರವ

localview news

ಬೆಂಗಳೂರು :ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ವತಿಯಿಂದ ಸೋಮವಾರ ಬೆಂಗಳೂರಿನ ಬ್ಯಾಂಕಿನ ಕೇಂದ್ರ ಕಚೇರಿ ಸಭಾಂಗಣದಲ್ಲಿ ವಿಧಾನ ಪರಿಷತ್ ನೂತನ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ಸತ್ಕರಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ಸನ್ಮಾನಿಸಿದ್ದಕ್ಕಾಗಿ ಬ್ಯಾಂಕಿನ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರ, ಮಾರ್ಗದರ್ಶನದಲ್ಲಿ ಕೆಲಸ ನಿರ್ವಹಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಅಪೆಕ್ಷ ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೇವರಾಜ್, ಪ್ರಧಾನ ವ್ಯವಸ್ಥಾಪಕರಾದ ಲೀನಾಕುಮಾರ ಹಾಗೂ ಬ್ಯಾಂಕಿನ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.