Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ರಾಹುಲ್ ಜಾರಕಿಹೊಳಿ ಸಹಾಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೂಲಿ ಕಾರ್ಮಿಕರು

localview news

ಯಮಕನಮರಡಿ: ಹೊನಗಾ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಯನ್ನು ಯುವ ನಾಯಕ ರಾಹುಲ್‌ ಜಾರಕಿಹೊಳಿ ಪರಿಶೀಲಿಸಿದರು.

ನಂತರ ಕೂಲಿ ಕಾರ್ಮಿಕರ ಆರೋಗ್ಯ ವಿಚಾರಿಸಿದ ಅವರು, ಕೋವಿಡ್‌ ಪ್ರಕರಣ ಹೆಚ್ಚಳವಾಗುತ್ತಿದ್ದು, ಉತ್ತಮ ಆರೋಗ್ಯ ಕಾಯ್ದುಕೊಂಡು ಕೆಲಸ ಮಾಡಬೇಕೆಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಕೂಲಿ ಕಾರ್ಮಿಕರಿಗೆ ಕೋವಿಡ್‌ ಕಿಟ್ಟ್‌ ವಿತರಿಸಿದರು. ಹೊನಗಾ ಗ್ರಾಮದಲ್ಲಿ 17 ಲಕ್ಷ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

ಹೂನಗಾ ಗ್ರಾಮ ಪಂಚಾಯತ್‌ ಅಧ್ಯಕ್ಷ ವಿಜಯ ಹೊನಮನಿ, ಮಾಜಿ ತಾಪಂ ಸದಸ್ಯ ಸಿದ್ದಪ್ಪಾ ನಾಯಿಕ, ಬೈರು ಕಾಂಬಳೆ, ಸುರೇಶ್ ನಾಯಕ್, ಪಿಡಿಓ ಸುಮಿತ್ರಾ ಮಿರ್ಜಿ ಸೇರಿದಂತೆ ಹೊನಗಾ ಗ್ರಾಪಂ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇದೇ ವೇಳೆ ಹೆಗ್ಗೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಗೆ ಭೇಟಿ ನೀಡಿ ಸೌಲಭ್ಯಗಳ ಬಗ್ಗೆ ಪರಿಶೀಲಿಸಿದರು.