Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಪಂಜಾಬನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತಾ ವೈಪಲ್ಯ ಖಂಡಿಸಿ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಮೌನ ಪ್ರತಿಭಟನೆ

localview news

ಬೆಳಗಾವಿ: ಮೊನ್ನೆ ನಡೆದ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿದಂತ ಭದ್ರತಾ ವೈಫಲ್ಯವನ್ನು ಖಂಡಿಸಿ ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ, ಬಿಜೆಪಿ ಎಸ್.ಸಿ. ಮೋರ್ಚಾ ಬೆಳಗಾವಿ ಮಹಾನಗರ ವತಿಯಿಂದ ನಗರದಲ್ಲಿ ಕಪ್ಪು ಬಟ್ಟೆ ಧರಿಸಿ ಪ್ರಯಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು.

ಬೆಳಗಾವಿ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದಲ್ಲಿ ಪಂಜಾಬನಲ್ಲಿ ಬಿಜೆಪಿ ಪಕ್ಷದ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಹೋಗುತ್ತಿರುವ ಸಂದರ್ಭದಲ್ಲಿ ಪಂಜಾಬ್ ಸರ್ಕಾರವು ಸರಿಯಾಗಿ ಭದ್ರತೆ ನೀಡಿಲ್ಲ ಕಾರಣದಿಂದ ಪ್ರಧಾನಿಗಳು ನಡು ರಸ್ತೆಯಲ್ಲಿ ನಿಲ್ಲುವ ಹಾಗೇ ಆಗಿದೆ ಎಂದು ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಪ್ಪು ಬಟ್ಟೆ ಕಟ್ಟಿಕೊಂಡು ಪಂಜಾಬ್ ಕಾಂಗ್ರೆಸ್ ಸರಕಾರದ ವಿರುದ್ದ ಅಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ಬಿಜೆಪಿ ಎಸ್ಸಿ ಜಿಲ್ಲಾಧ್ಯಕ್ಷರಾದ ಶ್ರೀ ಮಂಜುನಾಥ ಪಮ್ಮಾರ ಅವರ ನೇತೃತ್ವದಲ್ಲಿ ಕಪ್ಪು ಬಟ್ಟೆ ಧರಿಸಿ ಮೌನ ಪ್ರತಿಭಟನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮಾಂತರ ಎಸ್. ಸಿ. ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಜಿತೇಂದ್ರ ಮಾದಾರ್, ಎಸ್ ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ರಾವ್ ಬಹುದ್ದೂರ್ ಕದಂ,ರಾಜ್ಯ ಕಾರ್ಯಕಾರಣಿ ಸದಸ್ಯರಾದ ಶ್ರೀ ಪೃಥ್ವಿಸಿಂಗ, ಜಿಲ್ಲಾ ಉಪಾಧ್ಯಕ್ಷರಾದ ಸಂತೋಷ ರಾಠೋಡ,ಎಸ್.ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ, ಮಹೇಶ್ ವಡಗಾವಿ, ಭೀಮರಾವ್ ಪಾತ್ರೋಟ,ಎಲ್ಲೇಶ ಕೋಲಕಾರ್, ದಕ್ಷಿಣ ಮಂಡಲದ ಎಸ್.ಸಿ. ಮೋರ್ಚಾದ ಅಧ್ಯಕ್ಷರಾದ ಪ್ರವೀಣ್ ಅಲಕುಂಟೆ, ರಮೇಶ್ ಮಂಜಲಕರ ಹಾಗೂ ಪಕ್ಷದ ವಿವಿಧ ಪದಾಧಿಕಾರಿಗಳು,ಕಾರ್ಯಕರ್ತರು ಉಪಸ್ಥಿತರಿದ್ದರು