Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಅತಿಥಿ ಶಿಕ್ಷಕರಿಗೆ ಸಂಕ್ರಾಂತಿ ಸಿಹಿ ಸುದ್ದಿ ನೀಡಿದ ಕರ್ನಾಟಕ ಸರ್ಕಾರ್

localview news

ಬೆಂಗಳೂರು : ಸರ್ಕಾರದ ಆದೇಶದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಲ್ಲಿ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಕನಿಷ್ಕ ಶೇಕಡ 55 ರಷ್ಟು ಅಂಕಗಳನ್ನು ಪಡೆದು, ಎನ್.ಇ.ಟಿ., ಎಸ್.ಎಲ್.ಇ.ಟಿ. ಅಥವಾ ಪಿ.ಹೆಚ್.ಡಿ. ಮಾಡಿಕೊಂಡಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನವನ್ನು ರೂ.11,500/- ರಿಂದ ರೂ.13,000/-ಗಳಿಗೆ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 55 ರಷ್ಟು ಅಂಕಗಳನ್ನು ಪಡೆದ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನವನ್ನು ರೂ 9,500/- ರಿಂದ ರೂ. 11,000/-ಕ್ಕೆ ಹಚ್ಚಿ ಸಿ ಆದೇಶಿಸಲಾಗಿದೆ.

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳ ಗೌರವಧನ ಹೆಚ್ಚಳ ಹಾಗೂ ಇತರ ಬೇಡಿಕೆಗಳಿಗೆ ಸಂಬಂಧಿಸಿದಂತೆ, ವಿವರವಾದ ಅಧ್ಯಯನ ನಡೆಸಿ, ವಿಸ್ತ್ರತ ವರದಿಯನ್ನು ಸಲ್ಲಿಸುವಂತೆ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ ಇವರ ಅಧ್ಯಕ್ಷತೆಯಲ್ಲಿ, ಸರ್ಕಾರ ಕಾರ್ಯದರ್ಶಿ, ಆರ್ಥಿಕ ಇಲಾಖೆ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಾನೂನು ಇಲಾಖೆ ಹಾಗೂ ಸದಸ್ಯ ಕಾರ್ಯದರ್ಶಿಯನ್ನಾಗಿ ಆಯುಕ್ತರು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಇವರುಗಳನ್ನೊಳಗೊಂಡಂತೆ ಸಮಿತಿಯನ್ನು ರಚಿಸಲಾಗಿದೆ.

ಸಮಿತಿಯು ವಿವರವಾದ ಅಧ್ಯಯನ ನಡೆಸಿ, ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನು ಕಾನೂನಾತ್ಮಕವಾಗಿ, ಆಡಳಿತಾತ್ಮಕವಾಗಿ ಮತ್ತು ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಪರಿಶೀಲಿಸಿ, ವಿಸ್ತ್ರತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳ ಬೇಡಿಕೆಗಳ ಕುರಿತು ಸಮಿತಿಯ ಶಿಫಾರಸ್ಸಿನಂತೆ ಈ ಕೆಳಕಂಡಂತೆ ಇವೆ.

👉 ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಗರಿಷ್ಠ 8/10 ಗಂಟೆಗಳ ಕಾರ್ಯಭಾರಕ, ಬದಲಾಗಿ, ಗರಿಷ್ಯ: 15 ಗಂಟೆಗಳ ಕಾರ್ಯಭಾರವನ್ನು ನೀಡಿ, ಕೆಳಗಿನಂತೆ ಗೌರವಧನವನ್ನು ಹೆಚ್ಚಿಸುವುದು.
👉5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯು.ಜಿ.ಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ ರೂ.32,000/- (ಮೂವತ್ತೆರಡುಸಾವಿರ ರೂಪಾಯಿಗಳು ಮಾತ್ರ) ಆ 5 ವರ್ಷಕ್ಕಿಂತ ಕಡಿಮೆ ಅವಧಿಗೆ ಆತಿಥಿ ಉಪನ್ಯಾಸಕರಾಗಿ ಸೇವ ಸಲ್ಲಿಸಿದ ಮತ್ತು ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತ ಹೊಂದಿರುವವರಿಗೆ ರೂ.30,000/-(ಮೂವತ್ತು ಸಾವಿರ ರೂಪಾಯಿಗಳು ಮಾತ್ರ).
👉5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಅತಿಥಿಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯು.ಜಿ.ಸಿ ನಿಗಧಿಪಡಿಸಿದವಿದ್ಯಾರ್ಹತೆ ಹೊಂದಿಲ್ಲದವರಿಗೆ ರೂ. 28,000/- (ಇಪ್ಪತ್ತೆಂಟುಸಾವಿರ ರೂಪಾಯಿಗಳು ಮಾತ್ರ)
👉ಈ 5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತ ಹೊಂದಿಲ್ಲದವರಿಗೆ ರೂ. 26,000/- (ಇಪ್ಪತ್ತಾರು ಸಾವಿರ ರೂಪಾಯಿಗಳು ಮಾತ್ರ)
👉ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್‌ಗೆ ಬದಲಾಗಿ ಶೈಕ್ಷಣಿಕ ವರ್ಷಕ್ಕೆ (10 ತಿಂಗಳಿಗೆ) ನೇಮಕ ಮಾಡುವುದು.
👉 ಅತಿಥಿ ಉಪನ್ಯಾಸಕರ ಗೌರವಧನವನ್ನು ಪ್ರತಿ ತಿಂಗಳು 10ನೇ ತಾರೀಖಿನ ಒಳಗೆ ಪಾವತಿ ಮಾಡುವುದು.
👉 ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿದವರಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಾಧಾನ್ಯತೆ ಕೊಡುವುದು. ಇದಕ್ಕೆ ಸಂಬಂಧಪಟ್ಟ ಹಾಗೆ ಪ್ರಸ್ತುತ ಇಲಾಖೆಯಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ನಯ ಆಯ್ಕೆಪಟ್ಟಿ ತಯಾರಿಸುವುದು.
👉ಅತಿಥಿ ಉಪನ್ಯಾಸಕರಿಗೆ ಸಂಬಂಧಪಟ್ಟ ಕಾಲೇಜಿನಲ್ಲಿ ಗರಿಷ್ಠ 15 ಗಂಟೆಗಳ ಕಾರ್ಯಭಾರ ಲಭ್ಯವಿಲ್ಲದಿದ್ದರೆ, ಅಂತಹ ಅತಿ ಉಪನಾ ಸಕರಿಗೆ ಕಾರ್ಯಭಾರವಿರುವ ಇತರೆ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಲು ಸೂಚಿಸುವುದು. ಇದರ ಹೊರತಾಗಿಯೂ 15 ಗಂಟೆಗಳಿಗಿಂತ ಕಡಿಮೆ ಕಾರ್ಯಭಾರವಿದ್ದಲ್ಲಿ, ಎಷ್ಟು ಗಂಟೆಗಳ ಕಾರ್ಯಭಾರ ಉಪಲಬ್ಯವಿದೆಯೋ ಅದಕ್ಕೆ ಅನುಗುಣವಾಗಿ ಗೌರವಧನ ನೀಡುವುದು.
👉ಯು.ಜಿ.ಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರಿಗೆ ನಿಗಧಿತ ವಿದ್ಯಾರ್ಹತೆಯನ್ನು ಹೊಂದಲು 3 ವರ್ಷಗಳ ಕಾಲಾವಧಿ ನೀಡುವುದು. 3 ವರ್ಷಗಳ ನಂತರ ಯು.ಜಿ.ಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನಾಸಕರ ನೇಮಕಾತಿಯನ್ನು ಸಂಪೂರ್ಣವಾಗಿ ನಿರ್ಬಂಧಿಸುವುದು ಎಂದು ತಿಳಿಸಿದ್ದಾರೆ.