Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಮಹದಾಯಿ ಹೋರಾಟ ಪಕ್ಷದ ನಾಯಕರೊಂದಿಗೆ ಚರ್ಚಿಸಿ ನಿರ್ಧಾರ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

localview news

ಬೆಳಗಾವಿ: ಕೋವಿಡ್‌ ಕಡಿಮೆಯಾದ ಮೇಲೆ ಮುಂದಿನ ದಿನಗಳಲ್ಲಿ ಮೇಕೆದಾಟು ಹೋರಾಟದ ಮಾದರಿಯಲ್ಲಿಯೇ ಮಹದಾಯಿ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.

ನಗರದ ಕಾಂಗ್ರೆಸ್‌ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹದಾಯಿ ಹೋರಾಟ ಎಲ್ಲಿಂದ ಆರಂಭ ಮಾಡಬೇಕೆಂಬುವುದನ್ನು ನಮ್ಮ ಪಕ್ಷದ ನಾಯಕರೊಂದಿಗೆ ಚರ್ಚಿಸಿ, ರೂಪರೇಷೆ ತಯಾರಿಸಿ ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಮೇಕೆದಾಟು ಡ್ಯಾಂ ನಿರ್ಮಾಣ ಬಗ್ಗೆ ಈಗಾಗಲೇ ಹೋರಾಟ ಮಾಡಿ ಸರ್ಕಾರದ ಗಮನ ಸೆಳೆಯಲಾಗಿದ್ದು, ಹೋರಾಟ ಅರ್ಧಕ್ಕೆ ನಿಂತಿಲ್ಲ. ಅದು ಯಶ್ವಸಿಯಾಗಿದೆ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ಖಾಸಗಿ ಮಾರುಕಟ್ಟೆ ಆರಂಭದಿಂದ ರೈತರಿಗೆ ತೊಂದರೆ ಉಂಟಾಗುತ್ತಿದ್ದು, ಇದನ್ನು ತಡೆಗಟ್ಟಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇನೆ. ಆದರೆ ಖಾಸಗಿ ಮಾರುಕಟ್ಟೆ ಪರ ಸರ್ಕಾರ ನಿಂತಿದೆ. ಅದನ್ನು ಸರ್ಕಾರವೇ ತಡೆಗಟ್ಟಬೇಕು ಎಂದು ಒತ್ತಾಯಿಸಿದರು.