Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶಾಸಕರ ನಿಧಿಯಲ್ಲಿ ಹಲವೆಡೆ ರಸ್ತೆ ಕಾಮಗಾರಿಗಳಿಗೆ ಚಾಲನೆ

localview news

ಬೆಳಗಾವಿ : ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ 10 ಲಕ್ಷ ರೂ,ಗಳ ವೆಚ್ಚದಲ್ಲಿ ಕ್ಷೇತ್ರದ ಸುಳಗಾ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸೋಮವಾರ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತಿ ಅಧಕ್ಷರಾದ ತಾಯಿ ಕಲಕಾಂಬ್ಕರ, ಗ್ರಾಮ ಪಂಚಾಯತ್ ಸದಸ್ಯರು, ಬಾಗಣ್ಣ ನರೋಟಿ, ಯಲ್ಲಪ್ಪ ಕಲಕಾಂಬ್ಕರ, ಮಲ್ಲಪ್ಪ ಸುಳಗೇಕರ್, ಮಹಾದೇವ ಕಂಗ್ರಾಳಕರ್, ಮಾರುತಿ ಪಾಟೀಲ, ಬಾಳು ಪಾಟೀಲ, ವರ್ಷಾ, ಲಕ್ಷ್ಮೀ ನಾಯ್ಕ್ ಗ್ರಾಮದ ಮಹಿಳೆಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ (ಶಾಸಕರ ನಿಧಿ) ಕ್ಷೇತ್ರದ ಅತವಾಡ, ಉಚಗಾಂವ, ಕುದ್ರೆಮನಿ ಹಾಗೂ ತುರಮರಿ ಗ್ರಾಮಗಳಲ್ಲಿ ತಲಾ 10 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆಗಳ ನಿರ್ಮಾಣ ಕಾಮಗಾರಿಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಚಾಲನೆಯನ್ನು ನೀಡಿದರು

ಈ ಸಂದರ್ಭದಲ್ಲಿ ಆಯಾ ಗ್ರಾಮಗಳ ಹಿರಿಯರು, ಯುವರಾಜ ಕದಂ, ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.