Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ನುಡಿದಂತೆ ನಡೆಯುವ ಸರ್ಕಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

localview news

ಬೆಂಗಳೂರು: ನಮ್ಮ ಗುರಿ ಒಂದೇ. ನಾಡಿನ ಕಟ್ಟಕಡೆಯ ವ್ಯಕ್ತಿಗೂ ಸಮಾಜದಲ್ಲಿ ಸ್ವಾಭಿಮಾನದ ಸ್ಥಾನ ಸಿಗಬೇಕು. ಸಮಾಜದ ಅಭಿವೃದ್ಧಿಯಲ್ಲಿ ಪಾಲು ಸಿಗಬೇಕೆನ್ನುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸವನ್ನು ಮಾಡುವ ಭರವಸೆಯನ್ನು ಕನ್ನಡದ ಮಹಾಜನತೆಗೆ ಈಗಾಗಲೇ ನೀಡಲಾಗಿದೆ. ನಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನರುಚ್ಚರಿಸಿದರು.

ಅವರು ಇಂದು ಸರ್ಕಾರಕ್ಕೆ ಆರು ತಿಂಗಳು ತುಂಬಿದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ ಪಕ್ಷದ ವರಿಷ್ಠರು, ಶಾಸಕರು, ಕರ್ನಾಟಕದ ಮಹಾಜನತೆಯ ಆಶಯದಂತೆ ಕರ್ನಾಟಕದ ಅಧಿಕಾರ ವಹಿಸಿಕೊಂಡು 6 ತಿಂಗಳು ಕಳೆದಿದೆ. ಆರು ತಿಂಗಳಲ್ಲಿ ಹಲವಾರು ಜನಪರವಾದ ಕೆಲಸಗಳನ್ನು ಸರ್ಕಾರ ಮಾಡಿದೆ. ಮುಂಬರುವ ದಿನಗಳಲ್ಲಿ ಭವ್ಯ ಭವಿಷ್ಯ ಇರುವ ಕರ್ನಾಟಕವನ್ನು ಕಟ್ಟುವ ತೀರ್ಮಾನ ಮಾಡಿದ್ದೇವೆ.

ನವ ಭಾರತಕ್ಕಾಗಿ ನವ ಕರ್ನಾಟಕ ಎಂಬ ಧ್ಯೇಯವನ್ನಿಟ್ಟುಕೊಂಡು ಸರ್ಕಾರ ಕೆಲಸ ಮಾಡುತ್ತಿದೆ. ಸಚಿವ ಸಂಪುಟದ ಸಹೋದ್ಯೋಗಿಗಳು, ಶಾಸಕ ಮಿತ್ರರು, ಪಕ್ಷದ ಎಲ್ಲಾ ವರಿಷ್ಠರು, ಪದಾಧಿಕಾರಿಗಳು, ಕಾರ್ಯಕರ್ತರು ಸಹಕಾರ ನೀಡಿದ್ದಾರೆ. ಮಾಧ್ಯಮದ ಸ್ನೇಹಿತರೂ ಕೂಡ ಕೋವಿಡ್ ಹಾಗೂ ಪ್ರವಾಹ ಸಂದರ್ಭದಲ್ಲಿ ಕರ್ನಾಟಕದ ಅಭಿವೃದ್ಧಿಯ ವಿಚಾರದಲ್ಲಿ ಸಂಪೂರ್ಣವಾದ ಸಹಕಾರವನ್ನು ಕೊಟ್ಟಿದ್ದಾರೆ.

ಕೃತಜ್ಞತೆ: ಜನರ ಸಮಸ್ಯೆಗಳನ್ನು ನಮಗೆ ತಲುಪಿಸಲು ಬಹಳ ದೊಡ್ಡ ಪ್ರಯತ್ನವನ್ನು ಯಶಸ್ವಿಯಾಗಿ ಮಾಡಿದ ಮಾಧ್ಯಮದ ಸಂಸ್ಥೆಗಳಿಗೆ ಹಾಗೂ ಸ್ನೇಹಿತರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು. ತಮ್ಮ ಮೊದಲನೇ ಬಜೆಟ್ ಮಾರ್ಚ್ ಮೊದಲನೇ ವಾರದಲ್ಲಿ ಮಂಡನೆಯಾಗಲಿದೆ ಎಂದು ತಿಳಿಸಿದರು.