Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

50 ಲಕ್ಷ ರೂ ವೆಚ್ಚದಲ್ಲಿ ಪ್ರೌಢ ಶಾಲೆಯ 6 ಕೊಠಡಿ ನಿರ್ಮಾಣ: ಭೂಮಿ ಪೂಜೆ ನೆರವೇರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

localview news

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದ ಸರ್ಕಾರಿ ಕನ್ನಡ ಮಾಧ್ಯಮದ ಪ್ರೌಢಶಾಲೆಗೆ ನೂತನವಾಗಿ 6 ಹೆಚ್ಚುವರಿ ಕೊಠಡಿಗಳ ನಿರ್ಮಾಣದ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುರುವಾರ ಸಂಜೆ ಪೂಜೆ ನೆರವೇರಿಸಿದರು.

ಲೋಕೋಪಯೋಗಿ ಇಲಾಖೆಯ ಅನುದಾನದ ವತಿಯಿಂದ 50 ಲಕ್ಷ ರೂ,ಗಳ ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ. ಈ ಪ್ರೌಢಶಾಲೆ ಕಳೆದ 15 ವರ್ಷಗಳಿಂದ ಯಾವುದೇ ರೀತಿಯ ಅಭಿವೃದ್ಧಿ ಕಂಡಿರಲಿಲ್ಲ. ಈ ಪ್ರೌಢಶಾಲೆಯ ಅವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದು, ವಿಶೇಷ ಪ್ರಯತ್ನ ಮಾಡಿ, ಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಹಣ ಮಂಜೂರು ಮಾಡಿಸಿ ಕೊಠಡಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಭುಜಂಗ ಜೋಯಿ, ಕಾಶೀನಾಥ್ ಧರ್ಮೋಜಿ, ನಾಗೇಶಣ್ಣ ದೇಸಾಯಿ, ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವಸದಸ್ಯರು, ಪ್ರೌಢಶಾಲೆಯ ಸಿಬ್ಬಂದಿ ವರ್ಗದವರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.