Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಅರಭಾವಿ ಕ್ಷೇತ್ರದ ಅಭಿವೃದ್ಧಿಗೆ 57 ಕೋಟಿ ರು. ಬಿಡುಗಡೆ: ಶಾಸಕ ಬಾಲಚಂದ್ರ

localview news

ಗೋಕಾಕ : ಅರಭಾವಿ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ೫೦ ಕೋಟಿ ರೂ. ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ೨ ಕೋಟಿ ರೂ.ಗಳು ಸೇರಿ ಒಟ್ಟು ೫೨ ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಕ್ಷೇತ್ರದಲ್ಲಿರುವ ರಸ್ತೆಗಳ ಸುಧಾರಣೆಗಾಗಿ ಲೋಕೋಪಯೋಗಿ ಇಲಾಖೆಯ ಒಟ್ಟು ೩೪.೫೩ ಕಿ.ಮೀ ರಸ್ತೆಗಳ ಸುಧಾರಣೆಗಾಗಿ ೩೨ ಕೋಟಿ ರೂ. ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ೩೫.೩೦ ಕಿ.ಮೀ ರಸ್ತೆ ಸುಧಾರಣೆಗಾಗಿ ೧೮ ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ.

ಹಾಗೂ ಕ್ಷೇತ್ರದಲ್ಲಿರುವ ೨೨ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಮುಜರಾಯಿ ಇಲಾಖೆಯಿಂದ ೨ ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಅರಭಾವಿ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಮತ್ತು ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಒಟ್ಟು ೫೨ ಕೋಟಿ ರೂ.ಗಳ ವಿಶೇಷ ಅನುದಾನ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಸಿಎಂ ಬೊಮ್ಮಾಯಿ ಅವರಿಗೆ ಶುಭಾಷಯ : ೬೨ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ದೂರವಾಣಿ ಮೂಲಕ ಶುಭಾಷಯ ಕೋರಿದ್ದಾರೆ.