ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ: ಖಂಡಿಸಿದ ಬೆಳಗಾವಿ ಘಟಕ
ಬೆಳಗಾವಿ : ಪ್ರತಿಭಟನೆ ನಿರತ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾಜ್೯ ಮಾಡಿರುವುದನ್ನು ಖಂಡಿಸಿ ಮಂಗಳವಾರ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಹಿತ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸಕಾಲದಲ್ಲಿ ಫಲಿತಾಂಶ ಪ್ರಕಟಿಸುವಂತೆ ಮತ್ತು ಇನ್ನಿತರ ಬೇಡಿಕೆಗಾಗಿ ಕ್ಯಾಂಪಸ್ ನಲ್ಲಿ ಪ್ರತಿಭಟನೆ ನಡೆಸುವ ವೇಳೆ ಪೊಲೀಸರು ಲಾಠಿ ಚಾಜ್೯ ಮಾಡಿರುವುದನ್ನು ಮನವಿಯಲ್ಲಿ ಖಂಡಿಸಿದ್ದಾರೆ.
ಶಿಕ್ಷಣ ಕ್ಷೇತ್ರದ ಭಾರತದಲ್ಲಿ ವಿಶೇಷ ಸ್ಥಾನ ಮಾನ ಹೊಂದಿ ಇನ್ನೂಳಿದ ರಾಜ್ಯಗಳಿಗೆ ಮಾದರಿಯಾಗಿರುವ ಬೆಂಗಳೂರು ವಿಶ್ವವಿದ್ಯಾಲಯ ಇತ್ತೀಚಿನ ದಿನಗಳಲ್ಲಿ ಪರೀಕ್ಷೆ, ಮೌಲ್ಯಮಾಪನ, ಶುಲ್ಕದಂತ ಸಮ್ಯೆಗಳಿಗೆ ಪ್ರಸಿದ್ದಿಯಾಗಿದ್ದು ದುರಂತ.
ವಿವಿಯಲ್ಲಿನ ಸಮಸ್ಯೆ ಬಗೆ ಹರಿಸುವಂತೆ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಮನಸೋ ಇಚ್ಚೆ ಥಳಿಸಿರುವುದನ್ನು ಮನವಿಯಲ್ಲಿ ಖಂಡಿಸಿದ್ದಾರೆ.