Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಪಂಚಮಸಾಲಿ ಕಾರ್ಯಕಾರಣಿಯಲ್ಲಿ ಮೂರು ಮಹತ್ವದ ನಿರ್ಧಾರ ಪ್ರಕಟಿಸಿದ ಶ್ರೀಗಳು

localview news

ಬೆಳಗಾವಿ : ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಕಾರ್ಯಕಾರಣಿ ಸಭೆಯಲ್ಲಿ ಮೂರು ಮಹತ್ವದ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ನಗರದಲ್ಲಿರುವ ಗಾಂಧಿ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೃಹತ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ನೀಡಿರುವ ಧಾನವನ್ನು ಕೊಡುವಂತೆ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಸೌಜನ್ಯಕ್ಕಾದರೂ ಅವರಿಗೆ ಸ್ಪಷ್ಟನೆ ಕೊಟ್ಟಿಲ್ಲ. ಆದ್ದರಿಂದ ಅದನ್ನು ಭೀಕ್ಷೆ ಬೇಡಿ ಹಿಂದಿರುಗಿಸಲಾಗುವುದು ಎಂದರು.

ಪಂಚಮಸಾಲಿ ಸಮುದಾಯಕ್ಕೆ 2 A ಮೀಸಲಾತಿ‌ ತಪ್ಪಿಸುವ ಹುನ್ನಾರ ನಡೆಸಿರುವ ಕಿಡಿಗೇಡಿಗಳನ್ನು ಈ ಹೋರಾಟದಿಂದ ದೂರ ಇಡಲಾಗುವುದು ಹಾಗೂ ಸರಕಾರ ಮಾತು ನೀಡಿದಂತೆ ಬಜೆಟ್ ಅಧಿವೇಶನ ಕ್ಕೂ ಮುನ್ನ ನಮ್ಮ‌ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು‌ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದರು.