ಶಾಲಾ, ಕಾಲೇಜು ಮಕ್ಕಳಲ್ಲಿ ವಿಷ ಬೀಜ ಬಿತ್ತುವುದು ಸರಿಯಲ್ಲ: ವಿಧಾನ ಪರಿಷತ್ ಸದಸ್ಯ ಚನ್ನರಾಜ
ಬೆಳಗಾವಿ: ಮುಸ್ಲಿಂ ವಿದ್ಯಾರ್ಥಿಗಳು ಮೊದಲಿನಿಂದಲೂ ಹಿಜಾಬ್ ಧರಿಸುಕೊಂಡು ಶಾಲಾ, ಕಾಲೇಜಿಗೆ ಹೋಗುತ್ತಿದ್ದರು. ಈಗ ಹೊಸದಾಗಿ ಮಾಡಿದ್ರೆ ಅದನ್ನು ಬಂದ್ ಮಾಡಲಿ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಹೇಳಿದರು.
ಬುಧವಾರದಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು ಹಿಜಾಬ್ ಕೇಸರಿ ಶಾಲು ವಿವಾದವನ್ನು ಕೆಲಸ ಪಟ್ಟ ಬದ್ಧ ಹಿತಾಸಕ್ತಿಗಳು ಶಾಲಾ, ಕಾಲೇಜು ಮಕ್ಕಳಲ್ಲಿ ವಿಷ ಬೀಜ ಬಿತ್ತುತ್ತಿದ್ದಾರೆ ಎಂದು ಹೇಳಿದರು.