Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

83.38 ಲಕ್ಷ ರೂ. ಕಾಮಗಾರಿಗೆ ಚಾಲನೆ ನೀಡಿದ ಚನ್ನರಾಜ

localview news

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಬಾಕ್ಸೈಟ್ ರಸ್ತೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ೮೩.೩೮ ಲಕ್ಷ ರೂ. ವೆಚ್ಚದ ಕಾಮಗಾರಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಬಾಕ್ಸೈಟ್ ರಸ್ತೆ ಬೆಳಗಾವಿ ನಗರಕ್ಕೆ ಹೊಂದಿಕೊಂಡಿದ್ದು, ಪ್ರಮುಖ ರಸ್ತೆಯಾಗಿದೆ. ಪ್ರತಿನಿತ್ಯ ಸಾವಿರಾರು ಜನ ಈ ರಸ್ತೆ ಮೂಲಕ ಸಂಚರಿಸುತ್ತಾರೆ. ಆದರೆ ಈ ರಸ್ತೆ ಅತಿವೃಷ್ಟಿಯಿಂದ ಹಾಳಾಗಿತ್ತು. ರಸ್ತೆ ಸಂಚಾರಿಗಳಿಗೆ ಉಂಟಾಗುತ್ತಿದ್ದ ತೊಂದರೆ ಮನಗಂಡು ಇದರ ಪುನರ್ ನಿರ್ಮಾಣಕ್ಕಾಗಿ ಶಾಸಕಿ ಲಕ್ಮೀ ಹೆಬ್ಬಾಳಕರ್ ಅವರು ವಿಶೇಷ ಪ್ರಯತ್ನದಿಂದ ಅನುದಾನ ಬಿಡುಗಡೆ ಮಾಡಿಸಿದ್ದರು. ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಹಿನ್ನೆಲೆಯಲ್ಲಿ ಈ ಭಾಗದ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳ ಕುರಿತಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಹಿಂಡಲಗಾ ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ಗ್ರಾಮದ ಹಿರಿಯರು, ಯುವರಾಜ ಕದಂ, ಮೃಣಾಲ್ ಹೆಬ್ಬಾಳಕರ್, ಮನೋಹರ್ ಬೆಳಗಾಂವ್ಕರ್, ರಘು ಕಾಂಡೇಕರ್ ಮೊದಲಾದವರು ಉಪಸ್ಥಿತರಿದ್ದರು.