Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ನ್ಯಾ.ನಾಗಮೋಹನ ದಾಸ್ ವರದಿ ಜಾರಿಗೆ ರಾಜಶೇಖರ ಆಗ್ರಹ

localview news

ಬೆಳಗಾವಿ: 'ಉದ್ಯೋಗ ಮತ್ತು ಶಿಕ್ಷಣದಲ್ಲಿ ಪರಿಶಿಷ್ಟ ಪಂಗಡಕ್ಕೆ ಶೇ.7.5 ಹೆಚ್ಚುವರಿ ಮೀಸಲಾತಿ ನೀಡುವ ಸಲುವಾಗಿ ಸರ್ಕಾರ ಶೀಘ್ರದಲ್ಲೇ ನ್ಯಾಯಮೂರ್ತಿ ನಾಗಮೋಹನ ದಾಸ್ ವರದಿ ಜಾರಿಗೊಳಿಸಬೇಕು' ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ರಾಜ್ಯ ಘಟಕದ ಉಪಾಧ್ಯಕ್ಷ ರಾಜಶೇಖರ ತಳವಾರ ಒತ್ತಾಯಿಸಿದರು.

ಕನ್ನಡ ಸಾಹಿತ್ಯ ಭವನದಲ್ಲಿ ಕರೆಯಲಾದ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗಮೋಹಮದಾಸ 'ವರದಿ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್.ನಲ್ಲಿ ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಏಕಾಂಗಿಯಾಗಿ ಧರಣಿ ನಡೆಸುತ್ತಿದ್ದಾರೆ.

ರಾಜ್ಯದಲ್ಲಿ ಲಕ್ಷಾಂತರ ಜನರು ಅವರು ಜೊತೆಗಿದ್ದಾರೆ. ಹಾಗಾಗಿ ಈ ಹೋರಾಟವನ್ನು ಹಗುರವಾಗಿ ಪರಿಗಣಿಸಬಾರದು. ಕೂಡಲೇ ಎಚ್ಚೆತ್ತು ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ಕೈಗೊಳ್ಳಲಾಗುವುದು' ಎಂದು ಎಚ್ಚರಿಸಿದರು.

'ರಾಜ್ಯದಲ್ಲಿ ಪರಿಶಿಷ್ಟ ಸಮುದಾಯದ ಜನಸಂಖ್ಯೆ 70 ಲಕ್ಷಕ್ಕೂ ಅಧಿಕವಿದೆ. ಆದರೆ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ನಮ್ಮ ಸಮುದಾಯ ಹಿಂದುಳಿದಿದೆ. ನಮ್ಮ ಸಮುದಾಯಕ್ಕೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇ.7.5 ಹೆಚ್ಚುವರಿ ಮೀಸಲಾತಿ ನೀಡಲು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ನ್ಯಾಯಮೂರ್ತಿ ನಾಗಮೋಹನ ದಾಸ್ ಏಕಸದಸ್ಯ ಪೀಠ ರಚಿಸಿ, ಸರ್ಕಾರಕ್ಕೆ ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿತ್ತು.ಆದರೆ, ಕೆಲ ತಿಂಗಳಲ್ಲೇ ಸರ್ಕಾರ ಪತನವಾಗಿದ್ದರಿಂದ ಬೇಡಿಕೆ ಈಡೇರಿಲ್ಲ.

ಬಿಜೆಪಿ ಸರ್ಕಾರ ತಕ್ಷಣ ನಮ್ಮ ಮನವಿಗೆ ಸ್ಪಂದಿಸಬೇಕು' ಎಂದು ಆಗ್ರಹಿಸಿದರು.

ಜಿಲ್ಲಾ ವಾಲ್ಮೀಕಿ ಸಮಾಜದ ಪ್ರಧಾನ ಕಾರ್ಯದರ್ಶಿ ದಿನೇಶ ಬಾಗಡೆ, ಪಾಂಡುರಂಗ ನಾಯಕ, ಸಂಜಯ ನಾಯಕ, ಅಶೋಕ ನಾಯಕ ಇತರರಿದ್ದರು.