ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವಾಗ ಎಚ್ಚರಿಕೆ ಇರಲಿ
ಬೆಳಗಾವಿ: ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದ ಸಾಮಾಜಿಕ ಜಾಲತಾಣದಲ್ಲಿ ಪ್ರಚೋಧನೆಯ ಪೋಸ್ಟ್ ಹಾಕಿದ್ದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ನಗರ ಪೊಲೀಸ್ ಆಯುಕ್ತಾಲಯ ಪ್ರಕಟಣೆ ಹೊರಡಿಸಿದೆ.
ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಲು ವಾಟ್ಸಪ್, ಫೇಸ್ ಬುಕ್ ಇನ್ಸ್ಟಾ ಗ್ರಾಮ್ ಹಾಗೂ ಇತರೆ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ, ಪೋಸ್ಟರ್ ಗಳನ್ನು ಹಾಕಿದ್ದಲ್ಲಿ ಇದಕ್ಕೆ ಸಂಬಂಧಿಸಿದಂತೆ ಯಾರಾದರೂ ಗುಂಪುಗಾರಿಕೆ, ಗಲಾಟೆ, ದೊಂಬಿ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಚ್ಚರಿಕೆ ನೀಡಿದ್ದಾರೆ.