Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ನಂದಿಹಳ್ಳಿಯಲ್ಲಿ 1.07 ಕೋಟಿ ರೂ.ವೆಚ್ಚದ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ

localview news

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ನಂದಿಹಳ್ಳಿಯಲ್ಲಿ 1.07 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶನಿವಾರ ಸಂಜೆ ಚಾಲನೆ ನೀಡಿದರು.

ಕರ್ನಾಟಕ ನೀರಾವರಿ ನಿಗಮದ ವತಿಯಿಂದ 60 ಲಕ್ಷ ರೂ,ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ‌ ನಿರ್ಮಾಣದ ಕಾಮಗಾರಿ, ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 28 ಲಕ್ಷ ರೂ,ಗಳ ವೆಚ್ಚದಲ್ಲಿ ನಂದಿಹಳ್ಳಿ ಗ್ರಾಮದಿಂದ ಯರಮಾಳವರೆಗೆ ರಸ್ತೆಯ ಅಭಿವೃದ್ಧಿ, ಲೋಕೋಪಯೋಗಿ ಇಲಾಖೆಯ ವತಿಯಿಂದ 12 ಲಕ್ಷ ರೂ,ಗಳ ವೆಚ್ಚದಲ್ಲಿ ನಂದಿಹಳ್ಳಿ ಗ್ರಾಮದಿಂದ ಬೊರಗಾಂವ ಗರ್ಲಗುಂಜಿ ರಸ್ತೆಯ ಅಭಿವೃದ್ಧಿಗೆ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.

ಬ್ರಹ್ಮಲಿಂಗ ದೇವಸ್ಥಾನದ ಅಭಿವೃದ್ಧಿಗಾಗಿ ಶಾಸಕರ ಅನುದಾನದಲ್ಲಿ ದೇವಸ್ಥಾನದ ಕಮೀಟಿಯವರಿಗೆ 7 ಲಕ್ಷ ರೂ,ಗಳ ಚೆಕ್ ನ್ನು ಈ ಸಂದರ್ಭದಲ್ಲಿ ಹಸ್ತಾಂತರಿಸಲಾಯಿತು. ಜೊತೆಗೆ ನೂತನವಾಗಿ ನಿರ್ಮಾಣಗೊಂಡ ಪಶು ಆಸ್ಪತ್ರೆಯನ್ನು ಸಹ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಯುವರಾಜ ಕದಂ, ಮೃಣಾಲ ಹೆಬ್ಬಾಳಕರ್, ಸ್ಥಳೀಯ ಜನಪ್ರತಿನಿಧಿಗಳು, ಸಂಜು ಮಾದರ, ಸಾತೇರಿ ಬೆಳವತ್ಕರ್, ಜಿ ಕೆ ಪಾಟೀಲ, ನಿಂಗವ್ವ ಕುರುಬರ, ಮಹಾದೇವ ಜಾಧವ್, ರಾಮದಾಸ ಜಾಧವ್, ಸಹದೇವ ಬೆಳಗಾವ್ಕರ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.