ಸಾಹುಕಾರ್ ಶ್ರಮ: ಬಿಜೆಪಿಗೆ ಸೇರಿದ ಮಾಜಿ ಶಾಸಕ
ಬೆಂಗಳೂರು :ಮಾಜಿ ಶಾಸಕ ಅರವಿಂದ ಪಾಟೀಲ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಅಧಿಕೃತವಾಗಿ ಸೋಮವಾರ ಬಿಜೆಪಿ ಸೇರ್ಪಡೆಯಾದರು. ಈ ಹಿಂದೆ ಬಸವರಾಜ ಬೊಮ್ಮಾಯಿ ಗೃಹ ಸಚಿವರಾಗಿದ್ದಾಗ ಬೆಳಗಾವಿಗೆ ಬಂದ ಸಂದರ್ಭದಲ್ಲಿ ಅಂದಿನ ಸಿಎಂ ಆಗಿದ್ದ ಯಡಿಯೂರಪ್ಪ ಅವರ ಅನುಮತಿ ಪಡೆದಿದ್ದ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ಇಂದು ಅರವಿಂದ ಪಾಟೀಲ ಬಿಜೆಪಿ ಸೇರ್ಪಡೆಯಾಗಿದ್ದಾರೆ.