Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಫೆ‌.28ಕ್ಕೆ ಕೇಂದ್ರ ಸಚಿವ ಗಡ್ಕರಿ ಬೆಳಗಾವಿಗೆ: ಸಂಸದೆ ಮಂಗಳಾ

localview news

ಬೆಳಗಾವಿ :ಫೆ.28 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆ 3, 972 ಕೋಟಿ ಕಾಮಗಾರಿಯ ಶಂಕು ಸ್ಥಾಪನೆಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಆಗಮಿಸಲಿದ್ದಾರೆ ಎಂದು ಸಂಸದೆ ಮಂಗಲಾ ಅಂಗಡಿ ಹೇಳಿದರು.

ಗುರುವಾರ ಕಾಡಾ ಕಚೇರಿಯ ಸಭಾಂಗಣದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಬೆಳಗಾವಿಯಿಂದ ಸಂಕೇಶ್ವರಕ್ಕೆ ಆರು ಲೈನ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶಂಕು ಸ್ಥಾಪನೆಗೆ ಆಗಮಿಸಲಿರುವ ಕೇಂದ್ರ ‌ಸಚಿವ ನಿತಿನ್ ಗಡ್ಕರ್ ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಸಚಿವ ಸಿ.ಸಿ.ಪಾಟೀಲ ಆಗಮಿಸಲಿದ್ದಾರೆ ಎಂದರು.

ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ವೆಚ್ಚ ಒಟ್ಟು 3,972 ಕೋಟಿ ರೂ. ವೆಚ್ಚದಲ್ಲಿ ಸುಮಾರು 238 ಕಿಮೀ ಆರು ಲೈನಿನ್ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲಾಗುವುದು. ಕಾಮಗಾರಿಗೆ ಚಾಲನೆ ನೀಡಲು ನಿತಿನ್ ಗಡ್ಕರಿ ಅವರೆ ಆಗಮಿಸುತ್ತಿದ್ದಾರೆ ಎಂದು ತಿಳಿಸಿದರು.