ಜಿಎಸ್ ಟಿ ವಿನಾಯಿತಿ; ಸಿಎಂ ಭರವಸೆ.
ಬೆಳಗಾವಿ: ರಾಜ್ಯದಲ್ಲಿರುವ ಹೆದ್ದಾರಿಗಳು ಮತ್ತು ರಿಂಗ್ ರಸ್ತೆಯ ಅಭಿವೃದ್ಧಿಗಾಗಿ ರಾಜ್ಯ ಸರಕಾರದ ವತಿಯಿಂದ ಜಿ.ಎಸ್.ಟಿ. ವಿನಾಯಿತಿ, ಭೂಸ್ವಾಧೀನ ಮತ್ತಿತರ ಸಹಕಾರವನ್ನು ರಾಜ್ಯ ಸರಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆಯನ್ನು ನೀಡಿದರು.
ರಸ್ತೆಗಳು ಅಭಿವೃದ್ಧಿ ಮಾತ್ರವಲ್ಲ ದೇಶದ ಭಾವೈಕ್ಯತೆಗೆ ಬೆಸುಗೆಯಾಗುವೆ ಎಂದು ಅವರು ಅಭಿಪ್ರಾಯಪಟ್ಟರು. ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಮೂಲಕ ಬೆಳಗಾವಿಯಲ್ಲಿ ರಸ್ತೆ ಸಂಪರ್ಕ ಕ್ರಾಂತಿ ಆಗಲಿದೆ.
ಸಚಿವ ನಿತಿನ ಗಡ್ಕರಿ ಅವರು ಮಹಾರಾಷ್ಟ್ರದ ಲ್ಲಿ ಲೋಕೋಪಯೋಗಿ ಸಚಿವರಾಗಿದ್ದಾಗ ಒಂದೇ ಯೋಜನೆಯಡಿ 58 ಕ್ಕೂ ಅಧಿಕ ಮೇಲ್ಸೆತುವೆ ನಿರ್ಮಿಸಿ ಇಡೀ ದೇಶದ ಗಮನ ಸೆಳೆದಿದ್ದರು.
ಬೃಹತ್ ರಸ್ತೆ ಯೋಜನೆಗಳಿಗೆ ಸಮರ್ಪಕವಾಗಿ ಹಣ ಹೊಂದಿಸುವ ಮೂಲಕ ಮೂಲಸೌಕರ್ಯಗಳನ್ನು ಹೇಗೆ ಅಭಿವೃದ್ಧಿ ಪಡಿಸಬೇಕು ಎಂಬುದನ್ನು ದೇಶಕ್ಕೆ ತೋರಿಸಿಕೊಟ್ಟಿದ್ದಾರೆ.
ರಾಜ್ಯದಲ್ಲಿ ಒಂದು ರಸ್ತೆ ಮೇಲ್ದರ್ಜೆಗೆ ಏರಿಸಲು ವರ್ಷಗಟ್ಟಲೆ ಬೇಕಾಗಿತ್ತು.ಆದರೆ ಸಚಿವ ನಿತಿನ್ ಗಡ್ಕರಿ ಕಾಲದಲ್ಲಿ ಐದು ಸಾವಿರಕ್ಕೂ ಅಧಿಕ ಕಿ.ಮೀ. ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು.