Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ದೇವಸ್ಥಾನ ಜೀರ್ಣೋದ್ಧಾರಕ್ಕೆ 5 ಲಕ್ಷ ರೂ. ಶಾಸಕರ ನಿಧಿ

localview news

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಎಳೇಬೈಲ ಗ್ರಾಮದ ಶ್ರೀ ದುರ್ಗಾದೇವಿ ಮಂದಿರದ ಜೀರ್ಣೋದ್ಧಾರದ ಸಲುವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಶಾಸಕರ ನಿಧಿಯ ವತಿಯಿಂದ 5 ಲಕ್ಷ ರೂ. ನೀಡಲಾಗಿದೆ.

ಮೊದಲ ಕಂತಿನಲ್ಲಿ 2.77 ಲಕ್ಷ ರೂ,ಗಳ ಚೆಕ್ ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ದೇವಸ್ಥಾನದ ಕಮೀಟಿಯವರಿಗೆ ಮಂಗಳವಾರ ಹಸ್ತಾಂತರಿಸಿದರು.

ಈ ಸಮಯದಲ್ಲಿ ಗ್ರಾಮದ ಹಿರಿಯರು, ದೇವಸ್ಥಾನದ ಕಮೀಟಿಯವರು, ಮನೋಹರ್ ಬೆಳಗಾಂವ್ಕರ್, ಮೃಣಾಲ ಹೆಬ್ಬಾಳಕರ್, ಮಹೇಶ ಪಾಟೀಲ, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು.