Breaking
ಲೋಕಲವಿವ ತಾಲೂಕಾ ರಿಪೋರ್ಟರ 🎤ಆಗಲು ಬಯಸುವರು ಕ್ಲಿಕ್ ಮಾಡಿ    ಜಾಹೀರಾತಿಗಾಗಿ ಇಲ್ಲಿ ಕ್ಲಿಕ್ ಮಾಡಿ    

ಬೆಳಗಾವಿಯ ಜಯನಗರದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ನಿಮಿತ್ಯ ಮಹಾಪ್ರಸಾದ ಕಾರ್ಯಕ್ರಮ.

localview news

ಬೆಳಗಾವಿ: ಮಹಾಶಿವರಾತ್ರಿ ನಿಮಿತ್ಯವಾಗಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಹುಕ್ಕೇರಿ ಶ್ರೀಗಳ ನೇತೃತ್ವದಲ್ಲಿ ಇವತ್ತು ಮಹಾಪ್ರಸಾದಕ್ಕೆ ಚಾಲನೆ ನೀಡಲಾಯಿತು.

ಬೆಳಗಾವಿ ನಗರದಲ್ಲಿ ಮಹಾಶಿವರಾತ್ರಿ ನಿಮಿತ್ಯ ತುಂಬು ಸಡಗರದಿಂದ ಹಬ್ಬವನ್ನ ಆಚರಣೆ ಮಾಡಲಾಗುತ್ತದೆ ಅದೇ ರೀತಿ ಇವತ್ತು ಜಯನಗರದಲ್ಲಿನ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮಹಾಪ್ರಸಾದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಹುಕ್ಕೇರಿ ಶ್ರೀಗಳ ಅಮೃತ ಹಸ್ತದಿಂದ ಮಹಾಪ್ರಸಾದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಹಾಗೇಯೆ ನೂರಾರು ಭಕ್ತರು ಆಗಮಿಸಿ ಇವತ್ತು ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಹಾಪ್ರಸಾದ ಸ್ವೀಕರಿಸಿದರು.

ಇದೇ ಸಂದರ್ಭದಲ್ಲಿ ಸಂಸದೆ ಮಂಗಳಾ ಅಂಗಡಿ,ಮಾಜಿ ಶಾಸಕ ಸಂಜಯ್ ಪಾಟೀಲ, ನಗರ ಸೇವಕಿ ವೀಣಾ ವಿಜಾಪುರೆ, ಪೃಥ್ವಿ ಸಿಂಗ್ ಪೌಂಡೇಶನ ಅಧ್ಯಕ್ಷರಾದ ಪೃಥ್ವಿ ಸಿಂಗ್,ಬಿ.ಎಮ್.ಹೊಸಪೇಟಿ, ಸೇರಿದಂತೆ ಭಕ್ತಾಧಿಗಳು ಉಪಸ್ಥಿತರಿದ್ದರು.