ಕರ್ನಾಟಕ ಬಜೆಟ್ 2022 ಸಿಎಂ ಬೊಮ್ಮಾಯಿಯವರಿಗೆ ಅಭಿನಂದಿಸಿದ ಬಿ ಎಸ್ ವೈ ಮತ್ತು ಡಿ ಕೆ ಶಿವಕುಮಾರ್
ಬೆಂಗಳೂರು :ಇಂದು ತಮ್ಮ ಮೊದಲ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬೊಮ್ಮಯಿ ಅವರಿಗೆ ಬಿ ಎಸ್ ವೈ ಅಭಿನಂದನೆಗಳನ್ನು ತಳಿಸಿದ್ದಾರೆ.ಬೊಮ್ಮಾಯಿ ಮಂಡಿಸಿದ ಬಜೆಟ್ 2022 ಜನರ ನಿರೀಕ್ಷೆಗಳಿಗೆ ತಕ್ಕಂತೆ, ರಾಜ್ಯದ ಪ್ರಗತಿ, ಸ್ವಾವಲಂಬನೆಗೆ ಒತ್ತು ನೀಡುವ ಜೊತೆಗೆ ನವಕರ್ನಾಟಕ ನಿರ್ಮಾಣದ ಪರಿಕಲ್ಪನೆಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಹೊಸಚೈತನ್ಯ ಮತ್ತು ಶಕ್ತಿ ನೀಡುತ್ತಿದೆ.
ಸಾಂಕ್ರಾಮಿಕದ ಸವಾಲುಗಳ ನಿರ್ವಹಣೆಯ ನಡುವೆ ಈ ಬಜೆಟ್ ಅತ್ಯಂತ ಆಶಾದಾಯಕವಾಗಿದೆ. ರೈತರು, ನೀರಾವರಿ, ಮೂಲಸೌಕರ್ಯ, ಆರ್ಥಿಕ ಅಭಿವೃದ್ಧಿ, ಉದ್ಯೋಗ ಸೃಷ್ಠಿ, ಅಧಿಕ ಹೂಡಿಕೆಗೆ ಆದ್ಯತೆಯ ಜೊತೆಗೆ ಯುವಶಕ್ತಿ, ಮಹಿಳೆಯರು ಮತ್ತು ದುರ್ಬಲ ವರ್ಗಗಳ ಜನರ ಸಬಲೀಕರಣಕ್ಕೆ ಉತ್ತೇಜನ ನೀಡಲಾಗಿದೆ. ಕೃಷಿ, ಪೂರಕ ವಲಯಗಳಿಗೆ 33,700 ಕೋಟಿ ರೂ ಮೀಸಲು,
ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ 43,188 ಕೋಟಿ ರೂ, ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ ನಿಗದಿಪಡಿಸಿರುವುದು ಸ್ವಾಗತಾರ್ಹ. ಸರ್ವರಿಗೂ ಸಮಪಾಲು, ಸಮಬಾಳು, ಸಾಮಾಜಿಕ ನ್ಯಾಯ, ಅಂತ್ಯೋದಯದ ನಮ್ಮ ಬದ್ಧತೆಗೆ ಅನುಗುಣವಾಗಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸುವ ಸರ್ವಸ್ಪರ್ಶಿ ಬಜೆಟ್ ಇದಾಗಿದೆ ಎಂದು ಮಾಜಿ ಸಿಎಂ ಬಿ. ಎಸ್. ವೈ ಟ್ವಿಟ್ ಮೂಲಕ ತಿಳಿಸಿದ್ದಾರೆ.
ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ 43,188 ಕೋಟಿ ರೂ, ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ ನಿಗದಿಪಡಿಸಿರುವುದು ಸ್ವಾಗತಾರ್ಹ. ಸರ್ವರಿಗೂ ಸಮಪಾಲು, ಸಮಬಾಳು, ಸಾಮಾಜಿಕ ನ್ಯಾಯ, ಅಂತ್ಯೋದಯದ ನಮ್ಮ ಬದ್ಧತೆಗೆ ಅನುಗುಣವಾಗಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸುವ ಸರ್ವಸ್ಪರ್ಶಿ ಬಜೆಟ್ ಇದಾಗಿದೆ. (3/3)
— B.S. Yediyurappa (@BSYBJP) March 4, 2022
ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ಬಜೆಟ್ನಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿರುವುದು ಸ್ವಾಗತಾರ್ಹ. ನೀರಿನ ವಿಷಯದಲ್ಲಿ ಕರ್ನಾಟಕವನ್ನು ಸ್ವಾವಲಂಬಿಯಾಗಿಸುವ ಈ ನಿರ್ಧಾರಕ್ಕಾಗಿ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ ಎಂದು ಡಿ ಕೆ ಶಿ ಟ್ವಿಟ್ ಮಾಡಿದ್ದಾರೆ
ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ಬಜೆಟ್ನಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿರುವುದು ಸ್ವಾಗತಾರ್ಹ. ನೀರಿನ ವಿಷಯದಲ್ಲಿ ಕರ್ನಾಟಕವನ್ನು ಸ್ವಾವಲಂಬಿಯಾಗಿಸುವ ಈ ನಿರ್ಧಾರಕ್ಕಾಗಿ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ. 1/3
— DK Shivakumar (@DKShivakumar) March 4, 2022